ದೆಹಲಿಯ ಅಬಕಾರಿ ನೀತಿ(Delhi Excise Policy Case) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾ(K Kavitha) ರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು ಪರಿಗಣಿಸಿ ವಾದಗಳನ್ನು ಆಲಿಸುವುದನ್ನು ರೂಸ್ ಅವೆನ್ಯೂ ನ್ಯಾಯಾಲಯವು ಮೇ 20ಕ್ಕೆ ಮುಂದೂಡಿದೆ.
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.
ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.
ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೆಕವಿತಾ ಅವರನ್ನು ಮಂಗಳವಾರ ಕೋರ್ಟ್ ಎದುರು ಹಾಜರುಪಡಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ