ದೆಹಲಿ ಅಬಕಾರಿ ನೀತಿ ಪ್ರಕರಣ: ಸಂಜಯ್​ ಸಿಂಗ್​ಗೆ ಅ. 27ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿ ಹಾಗೂ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh) ಅವರನ್ನು ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೇ ವೇಳೆ ಸಿಂಗ್ ಅವರು ಮಧುಮೇಹಿಯಾಗಿರುವುದರಿಂದ ಔಷಧಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 10 ರಂದು, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರ ಇಡಿ ಕಸ್ಟಡಿಯನ್ನು ನ್ಯಾಯಾಲಯವು ಅಕ್ಟೋಬರ್ 13 ರವರೆಗೆ ವಿಸ್ತರಿಸಿತ್ತು.

ಸಂಜಯ್ ಸಿಂಗ್Image Credit source: The Week
Follow us
ನಯನಾ ರಾಜೀವ್
|

Updated on: Oct 13, 2023 | 3:17 PM

ದೆಹಲಿ ಅಬಕಾರಿ ನೀತಿ ಹಾಗೂ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh) ಅವರನ್ನು ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೇ ವೇಳೆ ಸಿಂಗ್ ಅವರು ಮಧುಮೇಹಿಯಾಗಿರುವುದರಿಂದ ಔಷಧಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 10 ರಂದು, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರ ಇಡಿ ಕಸ್ಟಡಿಯನ್ನು ನ್ಯಾಯಾಲಯವು ಅಕ್ಟೋಬರ್ 13 ರವರೆಗೆ ವಿಸ್ತರಿಸಿತ್ತು.

ಕಳೆದ ವಾರ ದೆಹಲಿ ಕೋರ್ಟ್ ಎಎಪಿ ಸಂಸದರನ್ನು 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿತ್ತು. ಇಡಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಿದರು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

ಮತ್ತಷ್ಟು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಜಯ್ ಸಿಂಗ್​​ಗೆ ಇಡಿ ಕಸ್ಟಡಿ ಅ.13ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿತ್ತು.

ರೆಸ್ಟೋರೆಂಟ್ ಮಾಲೀಕ ದಿನೇಶ್ ಅರೋರಾ ಸಿಂಗ್ ಮತ್ತು ಸಿಸೋಡಿಯಾ ಇಬ್ಬರಿಗೂ ಆಪ್ತರಾಗಿದ್ದರು ಎಂದು ಇಡಿ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಜುಲೈನಲ್ಲಿ, ಅರೋರಾ ಅವರನ್ನು ಇಡಿ ಬಂಧಿಸಿತು, ಅವರು ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್