ಮದ್ಯನೀತಿ ಪ್ರಕರಣ, ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ನಕಾರ

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ

ಮದ್ಯನೀತಿ ಪ್ರಕರಣ, ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ನಕಾರ
ಮನೀಶ್ ಸಿಸೋಡಿಯಾ
Follow us
ನಯನಾ ರಾಜೀವ್
|

Updated on:Oct 30, 2023 | 11:03 AM

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾದ ಆರು ತಿಂಗಳ ನಂತರ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮೊದಲ ಬಾರಿಗೆ ಬಂಧಿಸಿತ್ತು. ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಇದೇ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತು.

ಸಿಬಿಐ ಮತ್ತು ಇಡಿ ಎರಡೂ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ವಿರುದ್ಧ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್​ವಿಎನ್ ಭಟ್ಟಿ ಅವರ ಪೀಠ ಈ ತೀರ್ಪು ನೀಡಿದೆ. ಸುಪ್ರೀಂಕೋರ್ಟ್​ ಜುಲೈನಲ್ಲಿ ನೋಟಿಸ್ ಜಾರಿಗೊಳಿಸಿತ್ತು ಹಾಗೂ ಈ ತಿಂಗಳ ಆರಂಭದಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು.

2021ರಲ್ಲಿ ಆದಾಯವನ್ನು ಹೆಚ್ಚಿಸಲು ಹಾಗೂ ಮದ್ಯದ ವ್ಯಾಪಾರವನ್ನು ಸುಧಾರಿಸಲು ದೆಹಲಿ ಸರ್ಕಾರವು ರೂಪಿಸಿದ ಅಬಕಾರಿ ನೀತಿಯು ವಿವಾದದ ಮೂಲವಾಗಿದೆ. ನಂತರ ಅನುಷ್ಠಾನದಲ್ಲಿ ಅಕ್ರಮಗಳ ಆರೋಪದ ನಂತರ ಅದನ್ನು ಹಿಂತೆಗೆದುಕೊಳ್ಳಲಾಯಿತು.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ವ್ಯಾಪಾರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಯತ್ನಿಸಿದ ಈ ನೀತಿಯನ್ನು ಸಾರ್ವಜನಿಕ ಖಜಾನೆಯ ವೆಚ್ಚದಲ್ಲಿ ಖಾಸಗಿ ಸಂಸ್ಥೆಗಳಿಗೆ ಅನಪೇಕ್ಷಿತ ಲಾಭವನ್ನು ನೀಡಲು ಬಳಸಲಾಗಿದೆ ಮತ್ತು ಭ್ರಷ್ಟಾಚಾರದ ಹೊಡೆತಕ್ಕೆ ಸಿಲುಕಿದೆ ಎಂದು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳ ಪ್ರತಿಪಾದಿಸಿದೆ. ಇದು ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ಮನೀಶ್​ ಸಿಸೋಡಿಯಾ ಅವರ ಬಂಧನಕ್ಕೆ ಕಾರಣವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Mon, 30 October 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ