Manish Sisodia : ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್ ಸಿಸೋಡಿಯಾಗೆ ಜಾಮೀನು
Delhi Excise Policy Case ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia)ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಂದಿದೆ.
ಆಗಸ್ಟ್ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿತ್ತು. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಹೊರಬರಲಿದ್ದಾರೆ.
ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.
ಮತ್ತಷ್ಟು ಓದಿ: Manish Sisodia: ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಇದಾದ ಬಳಿಕ ಸಿಬಿಐ ಎಫ್ಐಆರ್ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್ 9ರಂದು ಬಂಧಿಸಿತ್ತು. ಸಿಸೋಡಿಯಅ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್ಗೆ ರಾಜೀನಾಮೆ ನೀಡಿದ್ದರು.
ಇಡಿ ಹಾಗೂ ಸಿಬಿಐ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿವೆ. ಹಗರಣದಲ್ಲಿ ಅವರ ಆಳವಾದ ಪಾತ್ರವನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಂಸ್ಥೆ ಹೊಂದಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮುಂದೆ ಹೇಳಿಕೊಂಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:53 am, Fri, 9 August 24