Manish Sisodia : ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್​ ಸಿಸೋಡಿಯಾಗೆ ಜಾಮೀನು

|

Updated on: Aug 09, 2024 | 11:07 AM

Delhi Excise Policy Case ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ.

Manish Sisodia : ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್​ ಸಿಸೋಡಿಯಾಗೆ ಜಾಮೀನು
ಮನೀಶ್​ ಸಿಸೋಡಿಯಾ
Follow us on

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia)ಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್​ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ತೀರ್ಪು ಹೊರಬಂದಿದೆ.

ಆಗಸ್ಟ್​ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್​ ತನ್ನ ತೀರ್ಪು ಕಾಯ್ದಿರಿಸಿತ್ತು. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್​ ಸಿಸೋಡಿಯಾ ಹೊರಬರಲಿದ್ದಾರೆ.

ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.

ಮತ್ತಷ್ಟು ಓದಿ: Manish Sisodia: ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಇದಾದ ಬಳಿಕ ಸಿಬಿಐ ಎಫ್​ಐಆರ್​ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್​ 9ರಂದು ಬಂಧಿಸಿತ್ತು. ಸಿಸೋಡಿಯಅ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್​ಗೆ ರಾಜೀನಾಮೆ ನೀಡಿದ್ದರು.

ಇಡಿ ಹಾಗೂ ಸಿಬಿಐ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿವೆ. ಹಗರಣದಲ್ಲಿ ಅವರ ಆಳವಾದ ಪಾತ್ರವನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಂಸ್ಥೆ ಹೊಂದಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮುಂದೆ ಹೇಳಿಕೊಂಡಿದೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Fri, 9 August 24