ಅಕ್ರಮ ಹಣ ವರ್ಗಾವಣೆ ಪ್ರಕರಣ; ಇಡಿ ಬಂಧನದ ವಿರುದ್ಧ ಕೇಜ್ರಿವಾಲ್ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು
Delhi Liquor Policy Scam: ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದ್ದರೂ ಕಕ್ಷಿದಾರರ ವಾದಗಳಿಗೆ ಧಕ್ಕೆಯಾಗದಂತೆ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಅರವಿಂದ್ ಕೇಜ್ರಿವಾಲ್ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಸ್ಪಷ್ಟಪಡಿಸಿದೆ.
ನವದೆಹಲಿ: ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು.
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಅವರು ಜೂನ್ 2 ರಂದು ಕೋರ್ಟ್ ಮುಂದೆ ಶರಣಾಗಿದ್ದರು.
ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿತು. ಇಡಿ ಮರುದಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವು “ವಿಕೃತ”, “ಏಕಪಕ್ಷೀಯ” ಮತ್ತು ಸಂಶೋಧನೆಗಳು ಅಪ್ರಸ್ತುತ ಸತ್ಯಗಳನ್ನು ಆಧರಿಸಿವೆ ಎಂದು ವಾದಿಸಿತ್ತು.
ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಿದ ದೆಹಲಿ ಕೋರ್ಟ್
ಜೂನ್ 21ರಂದು ದೆಹಲಿ ಹೈಕೋರ್ಟ್ ಎಎಪಿ ರಾಷ್ಟ್ರೀಯ ಸಂಚಾಲಕರಿಗೆ ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಜೂನ್ 26ರಂದು ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ಇಡಿಯಿಂದ ಬಂಧನಕ್ಕೊಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಜೂನ್ 25ರಂದು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು.
ಇದನ್ನೂ ಓದಿ: Arvind Kejriwal: ಅಬಕಾರಿ ನೀತಿ ಹಗರಣ; ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಏನಿದು ಅಬಕಾರಿ ನೀತಿ ಪ್ರಕರಣ?:
ಅಬಕಾರಿ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ನಂತರ ಇಡಿ ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.
ಏಪ್ರಿಲ್ 9ರಂದು ನೀಡಲಾದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ದೆಹಲಿ ಹೈಕೋರ್ಟ್ ಅವರ ಬಂಧನವನ್ನು ಎತ್ತಿಹಿಡಿದಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ