ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ
ಕೆ ಕವಿತಾ
Follow us
ನಯನಾ ರಾಜೀವ್
|

Updated on: Apr 11, 2024 | 2:32 PM

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ ಕವಿತಾ(K Kavitha) ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಸೋಮವಾರವೇ (ಏಪ್ರಿಲ್ 8) ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು, ಪ್ರಾಥಮಿಕ ದೃಷ್ಟಿಯಲ್ಲಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ತೋರುತ್ತದೆ ಎಂದು ವಕೀಲರು ಹೇಳಿದ್ದರು.

ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ 6 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆ ಬಳಿಕ ಇಂದು ತಿಹಾರ್ ಜೈಲಿನಿಂದ ಕೆ. ಕವಿತಾ ಬಂಧಿಸಲಾಗಿದೆ. ಬಿಆರ್‌ಎಸ್ ನಾಯಕ ಕೆ. ಕವಿತಾ ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಏಪ್ರಿಲ್ 5 ರಂದು ಕವಿತಾ ಅವರನ್ನು ಜೈಲಿನಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿತ್ತು.

ಇದಲ್ಲದೇ ಸಾಕ್ಷ್ಯ ನಾಶಪಡಿಸುವ ಪ್ರಯತ್ನವೂ ನಡೆದಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಪರಿಹಾರವನ್ನು ನೀಡಿದರೆ ಅವರು ಭವಿಷ್ಯದಲ್ಲಿಯೂ ಇದನ್ನು ಮಾಡಬಹುದು ಎಂದಿದ್ದರು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯದ ಪರವಾನಗಿಯಲ್ಲಿ ಹೆಚ್ಚಿನ ಪಾಲು ಪಡೆಯಲು ದೆಹಲಿಯ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪ ಹೊತ್ತಿರುವ ಕೆ ಕವಿತಾ ಸೌತ್ ಗ್ರೂಪ್‌ನ ಪ್ರಮುಖ ಸದಸ್ಯೆ ಎಂದು ಇಡಿ ಹೇಳಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.

ಮದ್ಯದ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಕೇಜ್ರಿವಾಲ್ ಅವರನ್ನು ಪ್ರಕರಣದ ಪ್ರಮುಖ ಕಿಂಗ್​ಪಿನ್​ ಎಂದು ಇಡಿ ಬಣ್ಣಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ