AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ತನಿಖಾ ಸಂಸ್ಥೆಯಿಂದ ಬಂಧನಕ್ಕೊಳಗಾದ ಆಮ್ ಆದ್ಮಿ ಪಕ್ಷದ ನಾಯಕರಿವರು

ಏಪ್ರಿಲ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಮದ್ಯದ ಲಾಬಿಗೆ ಲಾಭವಾಗುವಂತೆ ನೀತಿ ರೂಪಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತನಿಖಾಧಿಕಾರಿಗಳು ಹೇಳಿದ ಪ್ರಕರಣದಲ್ಲಿ ಅವರನ್ನು ಸಾಕ್ಷಿಯಾಗಿ ಪ್ರಶ್ನಿಸಲಾಗಿತ್ತು. ಅಂದಿನಿಂದ ಹೆಚ್ಚಿನ ವಿಚಾರಣೆಗೆ ಅವರನ್ನು ಕರೆಸಿಲ್ಲ.

ಕೇಂದ್ರ ತನಿಖಾ ಸಂಸ್ಥೆಯಿಂದ ಬಂಧನಕ್ಕೊಳಗಾದ ಆಮ್ ಆದ್ಮಿ ಪಕ್ಷದ ನಾಯಕರಿವರು
ಆಮ್ ಆದ್ಮಿ ಪಕ್ಷದ ನಾಯಕರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 04, 2023 | 7:49 PM

Share

ದೆಹಲಿ ಅಕ್ಚೋಬರ್ 04: ದೆಹಲಿ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ (Sanjay Singh) ಅವರನ್ನು ಜಾರಿ ನಿರ್ದೇಶನಾಲಯ (ED) ಇಂದು (ಬುಧವಾರ) ಬಂಧಿಸಿದೆ. ಕೇಂದ್ರ ಏಜೆನ್ಸಿಯಿಂದ ಬಂಧಿಸಲ್ಪಟ್ಟ ಮೂರನೇ ಎಎಪಿ ನಾಯಕರಾಗಿದ್ದಾರೆ ಸಿಂಗ್. ಇದಕ್ಕೂ ಮುನ್ನ ಮನೀಶ್ ಸಿಸೋಡಿಯಾ ಅವರನ್ನು ಈ ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು. ಕಳೆದ ವರ್ಷ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು.

ಏಪ್ರಿಲ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಮದ್ಯದ ಲಾಬಿಗೆ ಲಾಭವಾಗುವಂತೆ ನೀತಿ ರೂಪಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತನಿಖಾಧಿಕಾರಿಗಳು ಹೇಳಿದ ಪ್ರಕರಣದಲ್ಲಿ ಅವರನ್ನು ಸಾಕ್ಷಿಯಾಗಿ ಪ್ರಶ್ನಿಸಲಾಗಿತ್ತು. ಅಂದಿನಿಂದ ಹೆಚ್ಚಿನ ವಿಚಾರಣೆಗೆ ಅವರನ್ನು ಕರೆಸಿಲ್ಲ.

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಈ ಹಿಂದೆ ಇವರೊಂದಿಗೆ ನಂಟು ಹೊಂದಿರುವ ಸಿಬ್ಬಂದಿ ಮತ್ತು ಸದಸ್ಯರನ್ನು ಇಡಿ ಪ್ರಶ್ನಿಸಿತ್ತು.

ತಮ್ಮ ಪಕ್ಷದ ಸಂಸದರನ್ನು ಬೆಂಬಲಿಸಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಅವರ ನಿವಾಸದಲ್ಲಿ ಏನೂ ಸಿಗುವುದಿಲ್ಲ ಎಂದು ಹೇಳಿದ್ದು, 2024 ರ ಚುನಾವಣೆಗಳು ಬರುತ್ತಿದ್ದಂತೆ ಜಾರಿ ನಿರ್ದೇಶನಾಲಯ ಅಥವಾ ಇಡಿ ಮತ್ತು ಸಿಬಿಐನಂತಹ ಎಲ್ಲಾ ಸಂಸ್ಥೆಗಳು ಸಕ್ರಿಯಗೊಳ್ಳುತ್ತವೆ ಎಂದಿದ್ದಾರೆ.

ಮನೀಶ್ ಸಿಸೋಡಿಯಾ

ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಫೆಬ್ರವರಿ 26 ರಂದು ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತು. ಅಂದಿನಿಂದ ಅವರು ಬಂಧನದಲ್ಲಿದ್ದಾರೆ. ಅವರು ಫೆಬ್ರವರಿ 28 ರಂದು ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದು ಅಬಕಾರಿ ಖಾತೆಯನ್ನು ಹೊಂದಿದ್ದರು.

ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9 ರಂದು ಸಿಬಿಐ ಎಫ್‌ಐಆರ್‌ನಿಂದ ಉಂಟಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತು. ಫೆಡರಲ್ ತನಿಖಾ ಏಜೆನ್ಸಿಗಳ ಪ್ರಕಾರ, ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ನೀತಿಯನ್ನು ಜಾರಿಗೆ ತಂದಿತು, ಆದರೆ ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

ಇದನ್ನೂ ಓದಿ: ದೆಹಲಿಯ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಬಂಧನ

ಸತ್ಯೇಂದ್ರ ಜೈನ್

ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು. ಎಎಪಿ ನಾಯಕನಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳ ಮೂಲಕ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಇಡಿ ಅವರನ್ನು ಬಂಧಿಸಿತ್ತು.

ಸತ್ಯೇಂದ್ರ ಜೈನ್ ಅವರು ಫೆಬ್ರವರಿ 14, 2015 ರಿಂದ ಮೇ 31, 2017 ರವರೆಗೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಚರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ದೂರು ದಾಖಲಿಸಿತ್ತು. ಜೈನ್ ಪ್ರಸ್ತುತ ವೈದ್ಯಕೀಯ ಕಾರಣಗಳಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಸುಪ್ರೀಂ ಕೋರ್ಟ್ ಸೋಮವಾರ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಅಕ್ಟೋಬರ್ 8 ರವರೆಗೆ ವಿಸ್ತರಿಸಿದೆ.

59 ವರ್ಷ ವಯಸ್ಸಿನ ಅವರು ಜುಲೈ 21 ರಂದು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್