Delhi Fire: ಅಲಿಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 11 ಮಂದಿ ಸಾವು

ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ, ಮೊದಲು ಪೇಂಟ್​ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಅದು ರಾಸಾಯನಿಕ ಗೋದಾಮು ಪ್ರವೇಶಿಸಿದೆ. ಘಟನೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Delhi Fire: ಅಲಿಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 11 ಮಂದಿ ಸಾವು
ಅಗ್ನಿ ಅವಘಡImage Credit source: India Today
Follow us
ನಯನಾ ರಾಜೀವ್
|

Updated on: Feb 16, 2024 | 8:24 AM

ದೆಹಲಿಯ ಅಲಿಪುರದಲ್ಲಿರುವ ರಾಸಾಯನಿಕ ಗೋದಾಮುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಮತ್ತು ನಾಲ್ವರು ಗಾಯಾಳುಗಳನ್ನು ರಾಜಾ ಹರಿಶ್ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಫೆಬ್ರವರಿ 15ರಂದು ದೆಹಲಿಯ ಅಲಿಪೋರ್‌ನಲ್ಲಿರುವ ಪೇಂಟ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವರನ್ನು ಗುರುತಿಸುವುದೂ ಕಷ್ಟವಾಗುತ್ತಿದೆ.

ಭಾರೀ ಬೆಂಕಿಯ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ಅಲಿಪುರದ ಬಣ್ಣದ ಕಾರ್ಖಾನೆಯು ಜನನಿಬಿಡ ಪ್ರದೇಶದಲ್ಲಿದೆ. ಘಟನೆ ವೇಳೆ ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದು, ನೌಕರರು ಕೆಲಸದಲ್ಲಿ ನಿರತರಾಗಿದ್ದರು. ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ನೌಕರರು ತಪ್ಪಿಸಿಕೊಳ್ಳುವ ಅವಕಾಶವೂ ಇರಲಿಲ್ಲ. ಇದೇ ಕಾರಣಕ್ಕೆ ಕಾರ್ಖಾನೆಯಲ್ಲಿದ್ದವರು ಸುಟ್ಟು ಕರಕಲಾದ ಘಟನೆ ನಡೆದಿದೆ.

ಮತ್ತಷ್ಟು ಓದಿ: Bengaluru Fire Accident: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ಪೈಂಟ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು 7-8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಆಗಮಿಸಿದ್ದವು.

ಬೆಂಕಿ ಎಷ್ಟು ಪ್ರಬಲವಾಗಿತ್ತೆಂದರೆ ಕಾರ್ಖಾನೆಯ ಪಕ್ಕದ ಮನೆಗಳ ಮೇಲೆ ಕೂಡ ಪರಿಣಾಮ ಬೀರಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮೃತಪಟ್ಟವರನ್ನು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಶವಾಗಾರಕ್ಕೆ ಕಳುಹಿಸಲಾಗಿದೆ.

ಕಾರ್ಖಾನೆಯ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ರೈತರ ಪ್ರತಿಭಟನೆಗೆ ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದ್ದು, ಅಗ್ನಿಶಾಮಕ ಟೆಂಡರ್‌ಗಳು ವಿಳಂಬವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ