AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಮಕ್ಕಳ ಸಮೇತ 4 ಮಂದಿ ಸಜೀವ ದಹನ

ನಾಲ್ಕು ಅಂತಸ್ತಿಕ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಜೀವ ದಹನವಾಗಿರುವ ಘಟನೆ ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ. ಪಾರ್ಕಿಂಗ್ ಪ್ರದೇಶದಿಂದ ಬೆಂಕಿ ಹಬ್ಬುತ್ತಾ ಇಡೀ ಕಟ್ಟಡವನ್ನೇ ಆವರಿಸಿಕೊಂಡಿತ್ತು, ಆಗ ಹೊಗೆ ನೋಡಿ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.

ದೆಹಲಿ: ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಮಕ್ಕಳ ಸಮೇತ 4 ಮಂದಿ ಸಜೀವ ದಹನ
ದೆಹಲಿ ಬೆಂಕಿImage Credit source: NDTV
Follow us
ನಯನಾ ರಾಜೀವ್
|

Updated on:Mar 14, 2024 | 9:59 AM

ದೆಹಲಿಯ ಗೀತಾ ಕಾಲೋನಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಜೀವ ದಹನವಾಗಿದ್ದಾರೆ. ಪಾರ್ಕಿಂಗ್ ಪ್ರದೇಶದಿಂದ ಬೆಂಕಿ ಹಬ್ಬುತ್ತಾ ಇಡೀ ಕಟ್ಟಡವನ್ನೇ ಆವರಿಸಿಕೊಂಡಿತ್ತು, ಆಗ ಹೊಗೆ ನೋಡಿ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.

ತಕ್ಷಣವೇ ಅಗ್ನಿಶಾಮಕ ದಳ ತಂಡ ಸ್ಥಳಕ್ಕೆ ಆಗಮಿಸಿ ತುಂಬಾ ಹೊತ್ತಿನ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಪತಿ-ಪತ್ನಿಯರ ಜೊತೆಗೆ ಇಬ್ಬರು ಸಹೋದರಿಯರು ಕೂಡ ಮೃತಪಟ್ಟಿದ್ದಾರೆ.

ಬೆಳಗ್ಗೆ 5.22ರ ಸುಮಾರಿಗೆ ಘಟನೆ ನಡೆದಿದೆ, ಮೃತರನ್ನು ಮನೋಜ್​(30), ಸುಮನ್(28), ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶ: ಢಾಕಾದ ಆರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 43 ಮಂದಿ ಸಾವು, ಹಲವರಿಗೆ ಗಾಯ ಬಾಂಗ್ಲಾದೇಶದ ಢಾಕಾದಲ್ಲಿರುವ 6 ಅಂತಸ್ತಿನ ಶಾಂಪಿಂಗ್​ ಕಾಂಪ್ಲೆಕ್ಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು 43 ಮಂದಿ ಸಜೀವದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಗುರುವಾರ ತಡರಾತ್ರಿ, ಢಾಕಾದ ಗದ್ದಲದ ಡೌನ್‌ಟೌನ್ ಪ್ರದೇಶದಲ್ಲಿ ನೆಲೆಗೊಂಡಿರುವ ಗ್ರೀನ್ ಕೋಜಿ ಕಾಟೇಜ್ ಶಾಪಿಂಗ್ ಮಾಲ್ ಅನ್ನು ಜ್ವಾಲೆ ಆವರಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯ

ಮಾಲ್‌ನ ಮೊದಲ ಮಹಡಿಯಲ್ಲಿರುವ ಜನಪ್ರಿಯ ರೆಸ್ಟೊರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ, ಇದು ಕಟ್ಟಡದಾದ್ಯಂತ ವೇಗವಾಗಿ ಹರಡಿತು, ಅನೇಕರು ಒಳಗೆ ಸಿಲುಕಿಕೊಂಡರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರಕ್ಷಣಾ ಕಾರ್ಯ ನಡೆಯುತ್ತಿದೆ ಅಗ್ನಿಶಾಮಕ ಸಿಬ್ಬಂದಿಯ ಸತತ ಪ್ರಯತ್ನಗಳ

ಹೊರತಾಗಿಯೂ, ಬೆಂಕಿಯು 43 ವ್ಯಕ್ತಿಗಳ ಜೀವವನ್ನು ಬಲಿ ತೆಗೆದುಕೊಂಡಿತು, ಆದರೆ ಕನಿಷ್ಠ 22 ಇತರರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ಬೆಂಕಿಯ ಕಾರಣದ ಬಗ್ಗೆ ತನಿಖೆ ತನಿಖೆ ಮುಂದುವರಿದಿದ್ದು, ಈ ದುರಂತ ಘಟನೆಗೆ ಕಾರಣವನ್ನು ಶೀಘ್ರವೇ ಕಂಡುಹಿಡಿಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 40 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಎರಡು ಗಂಟೆಗಳಲ್ಲಿ ಬೆಂಕಿಯನ್ನು ಹತೋಟಿಗೆ ತಂದರು ಎಂದು ಅವರು ಹೇಳಿದರು. 75 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:58 am, Thu, 14 March 24

ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ