AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇ-ರಿಕ್ಷಾ ಚಾರ್ಜಿಂಗ್ ಪಾಯಿಂಟ್‌ನಿಂದ ಬೆಂಕಿ ಶಂಕೆ

ದೆಹಲಿಯ ವಿಶ್ವಾಸ್ ನಗರದಲ್ಲಿ ಭಾನುವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಇ-ರಿಕ್ಷಾ ಚಾರ್ಜಿಂಗ್ ಪಾಯಿಂಟ್‌ನಿಂದ ಬೆಂಕಿ ಆರಂಭವಾಗಿದೆ ಎಂದು ಶಂಕಿಸಲಾಗಿದೆ. ಈ ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇ-ರಿಕ್ಷಾ ಬ್ಯಾಟರಿ ಚಾರ್ಜಿಂಗ್ ಸುರಕ್ಷತೆ ಕುರಿತು ಎಚ್ಚರ ವಹಿಸುವ ಅಗತ್ಯವಿದೆ.

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇ-ರಿಕ್ಷಾ ಚಾರ್ಜಿಂಗ್ ಪಾಯಿಂಟ್‌ನಿಂದ ಬೆಂಕಿ ಶಂಕೆ
ಬೆಂಕಿ
ನಯನಾ ರಾಜೀವ್
|

Updated on: Nov 29, 2026 | 9:58 AM

Share

ನವದೆಹಲಿ, ನವೆಂಬರ್ 29: ದೆಹಲಿಯಲ್ಲಿ ಭಾನುವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಿಶ್ವಾಸ್ ನಗರದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮನೆಯ ನೆಲಮಹಡಿಯಲ್ಲಿ ಇ-ರಿಕ್ಷಾ ಚಾರ್ಜ್ ಮಾಡುತ್ತಿದ್ದ ಸ್ಥಳದಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ವೇಳೆ ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದವರು ಬೆಂಕಿ ಮತ್ತು ಹೊಗೆಯಿಂದ ಹೊರಬರಲಾಗದೆ ಸಿಲುಕಿಕೊಂಡಿದ್ದರು.

ಮುಂಜಾನೆ 4 ಗಂಟೆಗೆ ಕಾಣಿಸಿಕೊಂಡ ಬೆಂಕಿ

ದೆಹಲಿಯ ಶಹದಾರ ಜಿಲ್ಲೆಯ ವಿಶ್ವಾಸ್ ನಗರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಗಲ್ಲಿ ನಂಬರ್ 11ರಲ್ಲಿರುವ ಮನೆಯ ನೆಲಮಹಡಿಯಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 4.13ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮನೆಯ ನೆಲಮಹಡಿಯಲ್ಲಿ ಇ-ರಿಕ್ಷಾಗಳನ್ನು ಚಾರ್ಜ್ ಮಾಡುವ ವ್ಯವಸ್ಥೆ ಇತ್ತು. ಅಲ್ಲಿಂದ ಬೆಂಕಿ ಆರಂಭವಾಗಿ ಕಟ್ಟಡದ ಇತರ ಭಾಗಗಳಿಗೂ ಹರಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಲಿನ ಮಹಡಿಯಲ್ಲಿ ಸಿಲುಕಿದ್ದ ಆರು ಮಂದಿ

ಬೆಂಕಿ ಕಾಣಿಸಿಕೊಂಡಾಗ ಮನೆಯ ಮೇಲಿನ ಮಹಡಿಯಲ್ಲಿ ಆರು ಮಂದಿ ಇದ್ದರು. ಬೆಂಕಿ ಮತ್ತು ದಟ್ಟ ಹೊಗೆಯಿಂದಾಗಿ ಅವರಿಗೆ ಹೊರಬರಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಎಲ್ಲ ಆರು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ ಅವರಲ್ಲಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ರಾತ್ರಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

ಇ-ರಿಕ್ಷಾ ಚಾರ್ಜಿಂಗ್ ಪಾಯಿಂಟ್‌ನಿಂದ ಬೆಂಕಿ?

ಮನೆಯ ನೆಲಮಹಡಿಯಲ್ಲಿ ಇ-ರಿಕ್ಷಾ ಚಾರ್ಜಿಂಗ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅಲ್ಲಿಯೇ ಮೊದಲು ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಆದರೆ ಶಾರ್ಟ್ ಸರ್ಕ್ಯೂಟ್ ಅಥವಾ ಬ್ಯಾಟರಿ ದೋಷವೇ ಬೆಂಕಿಗೆ ಕಾರಣವೇ ಎಂಬುದು ಇನ್ನೂ ಖಚಿತವಾಗಿಲ್ಲ.

ಇ-ರಿಕ್ಷಾಗಳಲ್ಲಿ ಬಳಸುವ ಬ್ಯಾಟರಿಗಳನ್ನು ಚಾರ್ಜ್ ಮಾಡುವಾಗ ವಿದ್ಯುತ್ ವ್ಯವಸ್ಥೆಯಲ್ಲಿ ದೋಷ ಉಂಟಾದರೆ ಬೆಂಕಿ ಕಾಣಿಸಿಕೊಳ್ಳುವ ಅಪಾಯವಿರುತ್ತದೆ. ವಿಶೇಷವಾಗಿ ಕಳಪೆ ವೈರಿಂಗ್, ಹಾನಿಗೊಂಡ ಚಾರ್ಜರ್ ಅಥವಾ ಬ್ಯಾಟರಿಯಲ್ಲಿನ ತಾಂತ್ರಿಕ ಸಮಸ್ಯೆಗಳು ಅಪಾಯಕ್ಕೆ ಕಾರಣವಾಗಬಹುದು. ಈ ಪ್ರಕರಣದಲ್ಲಿಯೂ ನಿಖರ ಕಾರಣ ತಿಳಿಯಲು ಪರಿಶೀಲನೆ ನಡೆಯುತ್ತಿದೆ.

ಪೊಲೀಸರಿಂದ ತನಿಖೆ ಮುಂದುವರಿಕೆ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೇಗೆ ಆರಂಭವಾಯಿತು, ಅದು ಮನೆಯ ಮೇಲಿನ ಮಹಡಿಗೆ ಹೇಗೆ ಹರಡಿತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ವಿಧಿವಿಜ್ಞಾನ ಮತ್ತು ತಾಂತ್ರಿಕ ಪರಿಶೀಲನೆಯ ಬಳಿಕವೇ ಬೆಂಕಿಗೆ ನಿಖರ ಕಾರಣ ತಿಳಿದುಬರಲಿದೆ. ಇ-ರಿಕ್ಷಾ ಚಾರ್ಜಿಂಗ್ ವೇಳೆ ವಹಿಸಬೇಕಾದ ಎಚ್ಚರಿಕೆ – ಕಂಪನಿಯು ಸೂಚಿಸಿರುವ ಚಾರ್ಜರ್ ಅನ್ನೇ ಬಳಸಿ. – ಹಾನಿಗೊಂಡ ವೈರ್ ಮತ್ತು ಚಾರ್ಜರ್‌ಗಳನ್ನು ಬಳಸಬೇಡಿ. – ಚಾರ್ಜ್ ಮಾಡುವ ಸ್ಥಳದಲ್ಲಿ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡಬೇಡಿ. – ಬ್ಯಾಟರಿ ಅತಿಯಾಗಿ ಬಿಸಿಯಾಗುತ್ತಿದ್ದರೆ ಚಾರ್ಜಿಂಗ್ ನಿಲ್ಲಿಸಿ. – ಚಾರ್ಜಿಂಗ್ ವ್ಯವಸ್ಥೆಯನ್ನು ನಿಯಮಿತವಾಗಿ ಪರಿಶೀಲಿಸಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ