Delhi fire tragedy: ಮುಂಡ್ಕಾ ಕಟ್ಟಡಕ್ಕಿಲ್ಲ ಅಗ್ನಿಶಾಮಕ ಎನ್‌ಒಸಿ: ಕಟ್ಟಡ ಮಾಲೀಕ ಪರಾರಿ

ವಾಣಿಜ್ಯ ಕಟ್ಟಡಕ್ಕೆ ಬೆಂಕಿ ಎನ್‌ಒಸಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಕಟ್ಟಡದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಕಟ್ಟಡದ ಮಾಲೀಕನನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Delhi fire tragedy: ಮುಂಡ್ಕಾ ಕಟ್ಟಡಕ್ಕಿಲ್ಲ ಅಗ್ನಿಶಾಮಕ ಎನ್‌ಒಸಿ: ಕಟ್ಟಡ ಮಾಲೀಕ ಪರಾರಿ
ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿದ್ದಾರೆ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 14, 2022 | 11:18 AM

ದೆಹಲಿ: ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 27 ಜನರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ಕಂಡುಬಂದಿದೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯಾಗಿರುವ ಕಟ್ಟಡದ 1ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಹಲವಾರು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಜನರು ಸಹಾಯಕ್ಕಾಗಿ ಅಂಗಲಾಚುತ್ತಿರುವದನ್ನು ಕಾಣಬಹುದಾಗಿದೆ. ಇನ್ನೂ ಕೆಲವರು ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕಟ್ಟಡದಿಂದ ಜಿಗಿದಿದ್ದಾರೆ. ಅಗ್ನಿಶಾಮಕ ತಂಡವು ಕ್ರೇನ್‌ಗಳನ್ನು ಬಳಸಿ ಕಟ್ಟಡದಿಂದ ಜನರನ್ನು ರಕ್ಷಿಣೆ ಮಾಡಿದ್ದಾರೆ. ಬೆಂಕಿ ಹೊತ್ತಿಕೊಂಡ ವಾಣಿಜ್ಯ ಕಟ್ಟಡ ಅಗ್ನಿ ದುರಂತ ನಿಯಂತ್ರಣಕ್ಕೆ ಬಂದ ಕೆಲವೇ ಗಂಟೆಗಳ ನಂತರ, ವಾಣಿಜ್ಯ ಕಟ್ಟಡಕ್ಕೆ ಬೆಂಕಿ ಎನ್‌ಒಸಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಕಟ್ಟಡದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಕಟ್ಟಡದ ಮಾಲೀಕನನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಪ್ಪು ಹೊಗೆಯ ನಡುವೆ ಜನರು ತಪ್ಪಿಸಿಕೊಳ್ಳಲು ಹಗ್ಗಗಳನ್ನು ಬಳಸುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಕಟ್ಟಡದ ಒಳಗೆ ಸಿಕ್ಕಿಬಿದ್ದವರಿಗೆ ಸಹಾಯ ಮಾಡಲು ದಿಲ್ಲಿ ಪೊಲೀಸ್ ಅಧಿಕಾರಿಗಳು ಕಿಟಕಿಗಳನ್ನು ಒಡೆದಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಕೆಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 30ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳಿಂದ ಮೂರು ಅಂತಸ್ತಿನ ಕಟ್ಟಡಕ್ಕೆ ತಗುಲಿದ ಬೆಂಕಿಯನ್ನು ಆರು ಗಂಟೆಗಳ ಸುದೀರ್ಘ ಅಗ್ನಿಶಾಮಕ ಕಾರ್ಯಾಚರಣೆಯ ನಂತರ ತಡರಾತ್ರಿ ನಂದಿಸಲಾಯಿತು. ಇಪ್ಪತ್ತೇಳು ಜನರು ಸಾವನ್ನಪ್ಪಿದ್ದು, ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ 4.45ಕ್ಕೆ ಬೆಂಕಿ ಹೊತ್ತಿಕೊಂಡ ಬಗ್ಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಪತ್ತೆಯಾಗಿದೆ. ಕಟ್ಟಡದ ಮೊದಲ ಮಹಡಿಯಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ. ಅವರನ್ನು ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಒಂದೇ ಮೆಟ್ಟಿಲು ಇದ್ದುದರಿಂದ ಜನರು ಹೊರಗೆ ಹೋಗಲು ಸಾಧ್ಯವಾಗಲಿಲ್ಲ. ಕಟ್ಟಡಕ್ಕೆ ಸರಿಯಾದ ಎನ್‌ಒಸಿ ಇರಲಿಲ್ಲ (ಅಗ್ನಿಶಾಮಕ ಇಲಾಖೆಯಿಂದ), ಎಂದು ಅಗ್ನಿಶಾಮಕ ಇಲಾಖೆಯ ವಿಭಾಗೀಯ ಅಧಿಕಾರಿ ಸತ್ಪಾಲ್ ಭಾರದ್ವಾಜ್ ಹೇಳಿದರು. ಪ್ರಾಥಮಿಕ ವಿಚಾರಣೆಯಲ್ಲಿ, ಇದು ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು ಎಂದು ಪೋಲೀಸರು ಹೇಳಿದರು.

ರಾಷ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ