AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

Delhi Fire Tragedy: ದೆಹಲಿಯ ವಿವೇಕ್ ವಿಹಾರ್ ಅಗ್ನಿ ದುರಂತದಲ್ಲಿ 9 ಮಂದಿ ಮೃತಪಟ್ಟಿದ್ದು, ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣವೆಂದು ಶಂಕಿಸಲಾಗಿದ್ದು, ಕಟ್ಟಡದ ಸುರಕ್ಷತಾ ನಿಯಮಗಳ ಉಲ್ಲಂಘನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ
ಪ್ರಧಾನಿ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 03, 2026 | 7:55 PM

Share

ನವದೆಹಲಿ, ಮೇ 3: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire accident) ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಭಾನುವಾರ ಬೆಳಗಿನ ಜಾವ ನಡೆದ ಈ ದಾರುಣ ಘಟನೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಈ ಧನಸಹಾಯವನ್ನು ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನೂ ಪ್ರಧಾನಿ ಘೋಷಿಸಿದ್ದಾರೆ. ಘಟನೆಯ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿ ಅವರು, “ದೆಹಲಿಯ ಅಗ್ನಿ ಅವಘಡ ಹೃದಯ ವಿದ್ರಾವಕವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ?

ಒಂದೇ ಕುಟುಂಬದ ಐವರು ಸಾವು

ವಿವೇಕ್ ವಿಹಾರ್‌ನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಎರಡನೇ ಮತ್ತು ಮೂರನೇ ಮಹಡಿಯಲ್ಲಿದ್ದ ಕುಟುಂಬಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.

ಕಟ್ಟಡದ ಕಿಟಕಿಗಳಿಗೆ ಅಳವಡಿಸಲಾಗಿದ್ದ ಬಲಿಷ್ಠ ಕಬ್ಬಿಣದ ಗ್ರಿಲ್‌ಗಳು ಮತ್ತು ಮೆಟ್ಟಿಲುಗಳ ಬಾಗಿಲು ಲಾಕ್ ಆಗಿದ್ದರಿಂದ ಒಳಗಿದ್ದವರಿಗೆ ಹೊರಬರಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಸಿಬ್ಬಂದಿ ಗ್ರಿಲ್‌ಗಳನ್ನು ಕತ್ತರಿಸಿ ಒಳಪ್ರವೇಶಿಸುವಷ್ಟರಲ್ಲಿ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದರು.

ಪ್ರಾಥಮಿಕ ತನಿಖೆಯ ಪ್ರಕಾರ, ಕಟ್ಟಡದ ಕೆಳಭಾಗದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ 14 ಅಗ್ನಿಶಾಮಕ ವಾಹನಗಳು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದವು.

ಇದನ್ನೂ ಓದಿ: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಮೇ ಮಧ್ಯಭಾಗದಲ್ಲೇ ಮುಂಗಾರು ಎಂಟ್ರಿ!

ಬೆಂಕಿಯಿಂದ ರಕ್ಷಿಸಲ್ಪಟ್ಟ ಉಳಿದವರನ್ನು ಹತ್ತಿರದ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡದ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More