ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]
ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.
ದೆಹಲಿ ಬಿಜೆಪಿ ಘಟಕದಿಂದಲೂ ನೆರವು: ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.
ಮಾಲೀಕನ ವಿರುದ್ಧ ಎಫ್ಐಆರ್: ದುರಂತ ಸಂಬಂಧ ಎಫ್ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.