ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಸಾಧು ಶ್ರೀನಾಥ್​

Updated on: Dec 08, 2019 | 12:08 PM

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಬಿಜೆಪಿ ಘಟಕದಿಂದಲೂ ನೆರವು:
ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.

ಮಾಲೀಕನ ವಿರುದ್ಧ ಎಫ್​ಐಆರ್:
ದುರಂತ ಸಂಬಂಧ ಎಫ್​ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us