AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ದಟ್ಟ ಮಂಜು, ಸರಿಯಾದ ಸಮಯಕ್ಕೆ ತಲುಪದ ವಿಮಾನ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬ

ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್, ಇಥಿಯೋಪಿಯಾ ಹಾಗೂ ಓಮನ್ ದೇಶಗಳ ಪ್ರವಾಸಕ್ಕೆ ಹೊರಟಿದ್ದಾರೆ. ಆದರೆ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಧಾನಿಯ ವಿದೇಶ ಪ್ರವಾಸಕ್ಕೆ ವಿಳಂಬವಾಗಿದೆ. ಬೆಳಗಿನ ವೇಳೆಯಲ್ಲಿ ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟವಾದ ಮಂಜು ಆವರಿಸಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲು ಸಾಧ್ಯವಾಗಲಿಲ್ಲ. ಪ್ರಧಾನಿ ಬೆಳಗ್ಗೆ 8.30ಕ್ಕೆ ಹೊರಡಬೇಕಾಗಿತ್ತು.

ದೆಹಲಿಯಲ್ಲಿ ದಟ್ಟ ಮಂಜು, ಸರಿಯಾದ ಸಮಯಕ್ಕೆ ತಲುಪದ ವಿಮಾನ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Dec 15, 2025 | 9:55 AM

Share

ನವದೆಹಲಿ, ಡಿಸೆಂಬರ್ 15: ಪ್ರಧಾನಿ ನರೇಂದ್ರ ಮೋದಿ(Narendra Modi) ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ದೇಶಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ವಿಮಾನ ಸರಿಯಾದ ಸಮಯಕ್ಕೆ ಬಾರದ ಪರಿಣಾಮ ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬವಾಗಿದೆ. ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜಿನಿಂದಾಗಿ ವಿಳಂಬವಾಯಿತು. ಪ್ರಧಾನಿ ಬೆಳಗ್ಗೆ 8.30 ಕ್ಕೆ ಹೊರಡಬೇಕಿತ್ತು. ‘‘ನಾನು ಜೋರ್ಡಾನ್‌ಗೆ ಭೇಟಿ ನೀಡುತ್ತಿದ್ದೇನೆ, ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಅಲ್ಲಿಗೆ ಹೋಗುತ್ತಿದ್ದೇನೆ. ಈ ಐತಿಹಾಸಿಕ ಭೇಟಿಯು ನಮ್ಮ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ’’ ಎಂದು ಪ್ರಧಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಿನ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಡಿಸೆಂಬರ್ 16-17 ರಂದು ಪ್ರಧಾನಿ ಮೋದಿ ಇಥಿಯೋಪಿಯಾಗೆ ಭೇಟಿ ನೀಡಲಿದ್ದಾರೆ ಮತ್ತು ಅಂತಿಮ ಹಂತದಲ್ಲಿ ಡಿಸೆಂಬರ್ 17-18 ರಂದು ಓಮನ್​ಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 16 ರಂದು ಪ್ರಧಾನಿ ಮೋದಿ ಅವರು ಇಥಿಯೋಪಿಯಾಗೆ ತೆರಳಲಿದ್ದಾರೆ.

ಇದು ಪೂರ್ವ ಆಫ್ರಿಕಾದ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಡಿಸ್ ಅಬಾಬಾದಲ್ಲಿ ಇಥಿಯೋಪಿಯನ್ ಪ್ರಧಾನಿ ಅಬಿ ಅಹ್ಮದ್ ಅಲಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ಓದಿ: ಸುಂಕದ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ; ವ್ಯಾಪಾರ, ತಂತ್ರಜ್ಞಾನ ಸಹಕಾರದ ಬಗ್ಗೆ ಚರ್ಚೆ

ಇಥಿಯೋಪಿಯಾ ನಂತರ, ಪ್ರಧಾನಿ ಮೋದಿ ಡಿಸೆಂಬರ್ 17 ರಂದು ಒಮನ್‌ಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಮೋದಿ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಒಮಾನ್ ದ್ವಿಪಕ್ಷೀಯ ಸಂಬಂಧಗಳ 70 ವರ್ಷಗಳನ್ನು ಆಚರಿಸಿದ್ದು, ಇದರ ಸ್ಮರಣಾರ್ಥವಾಗಿ ಪ್ರಧಾನಿ ಮೋದಿ ಓಮನ್‌ಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. 2023 ರ ನಂತರ ಇದು ಪ್ರಧಾನಿ ಮೋದಿ ಅವರ ಎರಡನೇ ಓಮನ್ ಭೇಟಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?