Satyendar Jain: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಮಧ್ಯಂತರ ಜಾಮೀನು ಅವಧಿ ಜುಲೈ 24ರವರೆಗೆ ವಿಸ್ತರಣೆ

|

Updated on: Jul 10, 2023 | 12:15 PM

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ  ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್(Satyendar Jain) ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ

Satyendar Jain: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಮಧ್ಯಂತರ ಜಾಮೀನು ಅವಧಿ ಜುಲೈ 24ರವರೆಗೆ ವಿಸ್ತರಣೆ
ಸತ್ಯೇಂದ್ರ ಜೈನ್
Follow us on

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ  ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್(Satyendar Jain) ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ. ವೈದ್ಯಕೀಯ ಕಾರಣಗಳಿಗಾಗಿ ಅವರಿಗೆ ಜಾಮೀನು ನೀಡಲಾಗಿತ್ತು.   ನ್ಯಾ. ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ವೈದ್ಯಕೀಯ ವರದಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.

ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ,  ಸಿಂಘ್ವಿ ಮೂರು ಆಸ್ಪತ್ರೆಗಳು ಜೈನ್‌ಗೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿವೆ, ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್​, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಇಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ನಾಗರಿಕನಿಗೆ ಇದೆ ಎಂದು ಹೇಳಿದೆ.

ಮತ್ತಷ್ಟು ಓದಿ:  Satyendra Jain: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಕಳೆದ ವರ್ಷ ಮೇ 30 ರಂದು ಇಡಿ ಜೈನ್ ಅವರನ್ನು ಬಂಧಿಸಿತ್ತು, ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಿತ್ತು.

2017ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಜೈನ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಜೈನ್ ಅವರನ್ನು ಬಂಧಿಸಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Mon, 10 July 23