AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ

ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ
ಸ್ನೇಹಾ
ನಯನಾ ರಾಜೀವ್
|

Updated on: Jul 14, 2025 | 8:21 AM

Share

ನವದೆಹಲಿ, ಜುಲೈ 14: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದ ಬಳಿಯಮುನಾ ನದಿಯಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಸ್ನೇಹಾ ಸಿಗ್ನೇಚರ್ ಸೇತುವೆಯಿಂದ ಜಿಗಿಯಲು ಯತ್ನಿಸಿದ್ದಳು ಆಗ ಕ್ಯಾಬ್ ಚಾಲಕ ಆಕೆಯನ್ನು ರಕ್ಷಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಆ ಪ್ರದೇಶದಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದ ಕಾರಣ , ಸ್ನೇಹಾ ಕ್ಯಾಬ್​ನಿಂದ ಇಳಿದ ಬಳಿಕ ಆಕೆಯ ಚಲನವಲನಗಳನ್ನು ಸರಿಯಾಗಿ ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಸ್ನೇಹಾ ಅಕ್ಕ ಬಿಪಾಶಾ ನೀಡಿರುವ ನಾಪತ್ತೆ ದೂರಿನ ಪ್ರಕಾರ ಪೊಲೀಸರು ಜುಲೈ 7ರ ಬೆಳಗ್ಗೆ ಸ್ನೇಹಾ ತಾಯಿ ಪಿಂಕಿ ಅವರಿಗೆ ತನ್ನ ಸ್ನೇಹಿತೆ ಪಿಟುನಿಯಾಳನ್ನು ಸರಾಯ್ ರೋಹಿಲ್ಲಾ ರೈಲು ನಿಲ್ದಾಣದಲ್ಲಿ ಬಿಡುವುದಾಗಿ ಹೇಳಿದ್ದಳು. ಸ್ನೇಹಾ ಬೆಳಗ್ಗೆ 5.15ರ ಸುಮಾರಿಗೆ ಮನೆಯಿಂದ ಹೊರಟಿದ್ದಳು.

ನಾವು ಬೆಳಗ್ಗೆ 8.45ಕ್ಕೆ ಕರೆ ಮಾಡಲು ಯತ್ನಿಸಿದಾಗ ಫೋನ್ ಸ್ವಿಚ್ಡ್​ ಆಫ್ ಆಗಿತ್ತು.ಆಕೆಯ ಸ್ನೇಹಿತೆಯನ್ನು ಸಂಪರ್ಕಿಸಿದಾಗ ಆಕೆ ತನ್ನನ್ನು ಭೇಟಿಯಾಗಲು ಬಂದೇ ಇಲ್ಲ ಎಂದು ಹೇಳಿದ್ದರು.ನಂತರ ನಾನು ಪಿಟೂನಿಯಾದಿಂದ ಕ್ಯಾಬ್ ಚಾಲಕನ ಸಂಖ್ಯೆಯನ್ನು ತೆಗೆದುಕೊಂಡು ಅವನಿಗೆ ಕರೆ ಮಾಡಿದೆ. ಅವರು ಸ್ನೇಹಾಳನ್ನು ವಜೀರಾಬಾದ್‌ನ ಸಿಗ್ನೇಚರ್ ಬ್ರಿಡ್ಜ್‌ನಲ್ಲಿ ಡ್ರಾಪ್ ಮಾಡಿದ್ದಾರೆ ಎಂದು ಹೇಳಿದರು ಎಂದು ಬಿಪಾಶಾ ಹೇಳಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಚಾಲಕನ ಮಾಹಿತಿ ಮೇರೆಗೆ ಕುಟುಂಬವು ಹುಡುಕಿದಾಗ ಸ್ನೇಹಾಳ ಯಾವುದೇ ಸುಳಿವು ಸಿಗಲಿಲ್ಲ, ಯಾರೋ ಅಲ್ಲಿಂದ ಆಕೆಯನ್ನು ಅಪಹರಿಸಿರಬಹುದು ಎಂದು ಭಾವಿಸಿದ್ದರು. ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಹುಟುಕಾಟ ಆರಂಭಿಸಿದ್ದರು. ಕೊನೆಯದಾಗಿ ಆಕೆ ಸಿಕ್ಕಿದ್ದಾಳೆ ಆದರೆ ಅದು ಶವವಾಗಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ