AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G-20 Summit: ದೆಹಲಿಗೆ ಹೋಗುತ್ತಿದ್ದಿರಾ? ನವದೆಹಲಿ, ದೆಹಲಿ, ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ತೆರಳುವವರಿಗೆ ಇಲ್ಲಿದೆ ಸಲಹೆ

ಜಿ-20 ಶೃಂಗಸಭೆ ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿದ್ದು, 7 ರಿಂದ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗುತ್ತದೆ. ಶೃಂಗಸಭೆಯ ಸಮಯದಲ್ಲಿ ಕೆಲವು ಮೆಟ್ರೋ ನಿಲ್ದಾಣಗಳ ಗುರುತಿಸಲಾದ ಗೇಟ್‌ಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಖಾಸಗಿ ವಾಹನಗಳಿಂದಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ಹೆಚ್ಚಿನ ಸ್ಥಳಗಳಲ್ಲಿ ಮೆಟ್ರೋವನ್ನು ಬಳಸಲು ದೆಹಲಿ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

G-20 Summit: ದೆಹಲಿಗೆ ಹೋಗುತ್ತಿದ್ದಿರಾ? ನವದೆಹಲಿ, ದೆಹಲಿ, ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ತೆರಳುವವರಿಗೆ ಇಲ್ಲಿದೆ ಸಲಹೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 05, 2023 | 2:37 PM

Share

ನವದೆಹಲಿ, ಸೆಪ್ಟೆಂಬರ್ 5: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯು (G-20 Summit) ದೇಶದಾದ್ಯಂತ ಸಂಚಲನ ಮೂಡಿಸಿದೆ. ದೆಹಲಿಯ ವಿವಿಧ ಭಾಗಗಳಲ್ಲಿ ವಿವಿಧ ಸಿದ್ಧತೆಗಳು ನಡೆಯುತ್ತಿದ್ದು, ಕೆಲವು ಸ್ಥಳಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಮಧ್ಯೆ, ಪ್ರಯಾಣದಲ್ಲಿರುವವರು ಗಮ್ಯ ತಲುಪುವುದು ಹೇಗೆ ಎಂಬ ಪ್ರಶ್ನೆಯೂ ಜನರಲ್ಲಿದೆ. ಸೆಪ್ಟೆಂಬರ್ 8 ರಿಂದ 10 ರ ನಡುವೆ ಯಾರಾದರೂ ನವದೆಹಲಿ, ಹಳೆ ದೆಹಲಿ ಅಥವಾ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಹೋಗಬೇಕಾದರೆ, ಅವರು ಹೇಗೆ ಹೋಗಬೇಕು ಎಂಬ ಬಗ್ಗೆ ದೆಹಲಿ ಪೊಲೀಸರು ಸಂಚಾರ ಸಲಹೆಗಳನ್ನು ನೀಡಿದ್ದಾರೆ.

ಜಿ-20 ಶೃಂಗಸಭೆ ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿದ್ದು, 7 ರಿಂದ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗುತ್ತದೆ. ಶೃಂಗಸಭೆಯ ಸಮಯದಲ್ಲಿ ಕೆಲವು ಮೆಟ್ರೋ ನಿಲ್ದಾಣಗಳ ಗುರುತಿಸಲಾದ ಗೇಟ್‌ಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಖಾಸಗಿ ವಾಹನಗಳಿಂದಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ಹೆಚ್ಚಿನ ಸ್ಥಳಗಳಲ್ಲಿ ಮೆಟ್ರೋವನ್ನು ಬಳಸಲು ದೆಹಲಿ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

ನೀಡಿರುವ ಸಂಚಾರ ಮಾರ್ಗಗಳನ್ನು ಗಮನದಲ್ಲಿಟ್ಟುಕೊಂಡರೆ ವಿಮಾನ ನಿಲ್ದಾಣ ಮತ್ತು ನಿಲ್ದಾಣಕ್ಕೆ ಹೋಗಲು ಯಾವುದೇ ತೊಂದರೆಯಾಗುವುದಿಲ್ಲ ಎಂದು ದೆಹಲಿ ಸಂಚಾರ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 10 ರಂದು, ಅಜ್ಮೇರಿ ಗೇಟ್‌ನಿಂದ ಹೊಸ ದೆಹಲಿ ರೈಲು ನಿಲ್ದಾಣ, ಶ್ಯಾಮ ಪ್ರಸಾದ್ ಮುಖರ್ಜಿ ರಸ್ತೆಯಿಂದ ಹಳೆ ದೆಹಲಿ ರೈಲು ನಿಲ್ದಾಣಕ್ಕೆ ಮಧ್ಯಾಹ್ನ 1 ರಿಂದ ಮಧ್ಯರಾತ್ರಿ 1 ರವರೆಗೆ ಹೋಗುವ ರಸ್ತೆಯಲ್ಲಿ ಕೆಲವು ನಿರ್ಬಂಧಗಳಿವೆ.

ನಿಜಾಮುದ್ದೀನ್ ನಿಲ್ದಾಣವನ್ನು ತಲುಪುವುದು ಹೇಗೆ?

ಹಜರತ್ ನಿಜಾಮುದ್ದೀನ್ ನಿಲ್ದಾಣಕ್ಕೆ ಹೋಗಬೇಕಾದ ಪ್ರಯಾಣಿಕರು ಮೆಟ್ರೋ ಬಳಸಬೇಕು ಎಂದು ದೆಹಲಿ ಸಂಚಾರ ಪೊಲೀಸರು ಹೇಳಿದ್ದಾರೆ. ಆದರೆ, ನೀವು ಕಾರ್ ಅಥವಾ ಬೈಕ್ ಮೂಲಕ ಹೋಗಬೇಕಾದರೆ ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮ ಕಾರಿಡಾರ್‌ಗಳ ಮೂಲಕ ಹೋಗಬೇಕಾಗುತ್ತದೆ. ವಿಮಾನ ನಿಲ್ದಾಣಕ್ಕೆ ಹೋಗಬೇಕಾದ ಪ್ರಯಾಣಿಕರು ಮೆಟ್ರೋವನ್ನು ಬಳಸಬೇಕು. ಇದಕ್ಕಾಗಿ ಆರೆಂಜ್ ಲೈನ್ ಉತ್ತಮವಾಗಿರುತ್ತದೆ. ಏಕೆಂದರೆ ಐಜಿಐ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 10 ರವರೆಗೆ ಕಾರ್ಯನಿರತವಾಗಿರುತ್ತದೆ.

ಇದನ್ನೂ ಓದಿ: ಜಿ20 ಶೃಂಗಸಭೆ; ದೆಹಲಿ ಟ್ರಾಫಿಕ್ ನಿರ್ಬಂಧ, ಸಂಚಾರ ನಿರ್ವಹಣೆ ಬಗ್ಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಪೊಲೀಸರು ನೀಡಿದ ಉತ್ತರ ಇಲ್ಲಿದೆ

ಸೆಪ್ಟೆಂಬರ್ 8, 9 ಮತ್ತು 10 ರಂದು ಉಂಟಾಗುವ ಗೊಂದಲವನ್ನು ನಿವಾರಿಸಲು ದೆಹಲಿ ಪೊಲೀಸರು ಪ್ರಯತ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ಮೆಟ್ರೋ ನಿಲ್ದಾಣವನ್ನು ಮಾತ್ರ ಮುಚ್ಚಲಾಗುವುದು, ಇತರ ನಿಲ್ದಾಣಗಳು ತೆರೆದಿರುತ್ತವೆ. ಆದರೂ ಅವುಗಳ ಪ್ರವೇಶ-ನಿರ್ಗಮನ ಗೇಟ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸ್ವಲ್ಪ ಸಮಯದವರೆಗೆ ಮುಚ್ಚಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದಲ್ಲದೆ, ಎಲ್ಲಾ ಅಗತ್ಯ ಅಂಗಡಿಗಳು ತೆರೆದಿರುತ್ತವೆ ಮತ್ತು ಪೂರೈಕೆ ವ್ಯವಸ್ಥೆ ಸಹ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ