ಮಿತಿಮೀರಿದ ಕೊರೊನಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್​ ಕರ್ಫ್ಯೂ ಜಾರಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ಭಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊರೊನಾ ಹಬ್ಬುವುದನ್ನು ತಡೆಯಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ತನಕ ನೈಟ್​ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಿತಿಮೀರಿದ ಕೊರೊನಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್​ ಕರ್ಫ್ಯೂ ಜಾರಿ
ಸಾಂದರ್ಭಿಕ ಚಿತ್ರ
Follow us
Skanda
| Updated By: ganapathi bhat

Updated on: Apr 06, 2021 | 2:22 PM

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಭಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊರೊನಾ ಹಬ್ಬುವುದನ್ನು ತಡೆಯಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ತನಕ ನೈಟ್​ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ದೇಶದಲ್ಲಿ ಒಂದೇ ದಿನ 1 ಲಕ್ಷ ಕೊವಿಡ್​ ಪ್ರಕರಣಗಳು ದಾಖಲಾಗಿದ್ದು, ಆರಂಭದಿಂದ ಇಲ್ಲಿಯವರೆಗೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಹೀಗಾಗಿ ದೇಶಾದ್ಯಂತ ಬಹುತೇಕ ರಾಜ್ಯಗಳು ಕಟ್ಟೆಚ್ಚರ ವಹಿಸುತ್ತಿವೆ.

ಮಹಾರಾಷ್ಟ್ರದಲ್ಲೂ ನೈಟ್​ ಕರ್ಫ್ಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿಗೆ ತಡೆಯೊಡ್ಡಲು ಸಂಪೂರ್ಣ ಮಹಾರಾಷ್ಟ್ರ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್​ಡೌನ್ ವಿಧಿಸಲು ಮಹಾರಾಷ್ಟ್ರ ಸರ್ಕಾರ ಎರಡು ದಿನಗಳ ಹಿಂದೆಯೇ ನಿರ್ಧರಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಈಗಾಗಲೇ ತಿಳಿಸಿದೆ.

ಕೇವಲ ಅನಿವಾರ್ಯ ಸೇವೆಗಳು ಮಾತ್ರ ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಬಹುದು. ಚಿತ್ರಮಂದಿರಗಳು, ಗಾರ್ಡನ್, ಮತ್ತು ಆಟದ ಅಂಗಣಗಳನ್ನು ತೆರೆಯುವಂತಿಲ್ಲ. ಸರ್ಕಾರಿ ಕಚೇರಿಗಳನ್ನು ಅರ್ಧದಷ್ಟು ಸಿಬ್ಬಂದಿಗಳ ಮೂಲಕ ತೆರೆಯಬಹುದು. ಕಟ್ಟಡ ನಿರ್ಮಾಣ, ಮಾರುಕಟ್ಟೆ ಮತ್ತು ಕಾರ್ಖಾನೆಗಳ ಚಟುವಟಿಕೆಗಳು ಕೊರೊನಾ ತಡೆ ಮಾರ್ಗಸೂಚಿಯ ಪ್ರಕಾರ ಕಾರ್ಯನಿರ್ವಹಿಸಬಹುದು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ.

ಪುಣೆಯಲ್ಲಿ ಈಗಾಗಲೇ ಜಾರಿಯಾಗಿದೆ ನೈಟ್ ಕರ್ಫ್ಯೂ ಪುಣೆ ಜಿಲ್ಲೆಯಲ್ಲಿ ಏಪ್ರಿಲ್ 3ರಿಂದಲೇ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿತ್ತು. ಪುಣೆ (ಮಹಾರಾಷ್ಟ್ರ) ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್​ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೆಲ್ ಹಾಗೂ ರೆಸ್ಟೋರೆಂಟ್​ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.

ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಪುಣೆಯಲಲ್ಲಿ ಏಪ್ರಿಲ್ 3ಕ್ಕೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: Covid-19 Prevention: ಜಗತ್ತಿನಾದ್ಯಂತ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; ಡೂಡಲ್​ ಮೂಲಕ ಮಾಸ್ಕ್​​ನ​ ಮಹತ್ವ ಸಾರಿದ ಗೂಗಲ್​ 

ಕೊರೊನಾ ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್