ಜನವರಿ 1, 2022ರವರೆಗೆ ದೆಹಲಿಯಲ್ಲಿ ಪಟಾಕಿ ಹೊಡೆಯುವಂತಿಲ್ಲ
ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.
ದೆಹಲಿ: ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನುನವದೆಹಲಿಯಲ್ಲಿ 2022ರ ಜನವರಿ 1ರವರೆಗೆ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸಾಲುಸಾಲು ಹಬ್ಬಗಳು ಬರಲಿದ್ದು ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹೀಗಾಗಿ ಪಟಾಕಿ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.
ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಮತ್ತದು ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆ ಆಧರಿಸಿ ಪಟಾಕಿ ನಿಷೇಧದ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಅಲ್ಲದೇ ವಾಯುಮಾಲಿನ್ಯ ಕೊವಿಡ್ ಪಿಡುಗಿನ ಈ ಸಂದರ್ಭದಲ್ಲಿ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿಸಲು ಸಿದ್ಧವಾಯ್ತು ಹೊಗೆ ಗೋಪುರ; ಅಕ್ಟೋಬರ್ 1ರಿಂದ ಕಾರ್ಯನಿರ್ವಹಣೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವಂತೂ ಮಿತಿಮೀರಿದೆ. ಅಲ್ಲಿನ ಜನರು ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶಿ ಸಂಬಂಧಿತ ಕಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾದ ದೆಹಲಿ ಸರ್ಕಾರ ಜನರಿಗೊಂದು ಗುಡ್ನ್ಯೂಸ್ ಕೊಟ್ಟಿದೆ. ದೆಹಲಿಯ ಕೊನಾಟ್ ಪ್ರದೇಶದಲ್ಲಿ ನಿರ್ಮಾಣವಾದ ಹೊಗೆ ಗೋಪುರ (Smog Tower)ದ ಪ್ರಯೋಗ ಮುಗಿದಿದೆ. ಅಕ್ಟೋಬರ್ 1ರಿಂದ ಈ ಗೋಪುರ ಕಾರ್ಯ ನಿರ್ವಹಿಸಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ. ಇಂದು ಟ್ವೀಟ್ ಮಾಡಿರುವ ಅವರು, ಹೊಗೆ ಗೋಪುರದ ಪ್ರಾಯೋಗಿಕ ಕಾರ್ಯ ಮುಕ್ತಾಯವಾಗಿದೆ. ಅಕ್ಟೋಬರ್ 1ರಿಂದ ಪೂರ್ಣ ಪ್ರಮಾಣದಲ್ಲಿ ಇದು ಕೆಲಸ ನಿರ್ವಹಿಸಲಿದೆ. ಅದರ ಉಸ್ತುವಾರಿ, ಮೇಲ್ವಿಚಾರಣೆ ನೋಡಿಕೊಳ್ಳಲು ಐಐಟಿ-ಬಾಂಬೆ, ಐಐಟಿ-ದೆಹಲಿ ಮತ್ತು ಡಿಪಿಸಿಸಿಯ ವಿಜ್ಞಾನಿಗಳ ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ಹೊಗೆ ಗೋಪುರ ಮಲಿನ ಯುಕ್ತ ಗಾಳಿಯನ್ನು ಶುದ್ಧೀಕರಣಗೊಳಿಸುತ್ತದೆ. ಇದರಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಯಲಿದೆ. ಜನರು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು. ನಗರದಲ್ಲಿ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ತಡೆಯಲು ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿ ಈ ಹೊಗೆ ಗೋಪುರವೂ ಒಂದು. ಇನ್ನು ಚಳಿಗಾಲದಲ್ಲಂತೂ ಇನ್ನಷ್ಟು ಕೆಟ್ಟ ಅನುಭವ ಆಗುತ್ತದೆ. ಅದನ್ನು ತಡೆಯಲೆಂದೇ ಕ್ರಿಯಾಯೋಜನೆ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಗೋಪಾಲ್ ರಾಯ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ನಿರ್ದೇಶಕ ಸುಸಿ ಗಣೇಶನ್ ವಿರುದ್ಧ ಮಿಟೂ ಆರೋಪ ಮಾಡಿದ್ದ ಲೀನಾ ಮಣಿಮೆಕಲೈ; ಪ್ರಕರಣದ ಇತ್ತೀಚಿನ ಮಾಹಿತಿ ಇಲ್ಲಿದೆ
ನಿರ್ದೇಶಕ ಸುಸಿ ಗಣೇಶನ್ ವಿರುದ್ಧ ಮಿಟೂ ಆರೋಪ ಮಾಡಿದ್ದ ಲೀನಾ ಮಣಿಮೆಕಲೈ; ಪ್ರಕರಣದ ಇತ್ತೀಚಿನ ಮಾಹಿತಿ ಇಲ್ಲಿದೆ
(Delhi Government bans Firecrackers till January 1 2022)