ದೆಹಲಿಯಲ್ಲಿ ಪೆಟ್ರೋಲ್​​ ಮೇಲಿನ ವ್ಯಾಟ್​ ಕಡಿತಗೊಳಿಸಿದ ಕೇಜ್ರಿವಾಲ್​ ಸರ್ಕಾರ; ಪ್ರತಿ ಲೀಟರ್​ಗೆ 8 ರೂ.ಇಳಿಕೆ

ಇಂಡಿಯನ್ ಆಯಿಲ್​ ಕಾರ್ಪೋರೇಶನ್​ ವೆಬ್​ಸೈಟ್​​ನಲ್ಲಿ ಉಲ್ಲೇಖವಾಗಿರುವ ಪ್ರಕಾರ ದೆಹಲಿಯಲ್ಲಿ ವ್ಯಾಟ್​ ಹೊರತಾದ ಪೆಟ್ರೋಲ್​ ಬೆಲೆ ಲೀಟರ್​ಗೆ 79.98 ರೂಪಾಯಿ ಇದೆ. ವ್ಯಾಟ್​ ಮೌಲ್ಯ 23.99 ರೂಪಾಯಿ ಆಗಿತ್ತು.

ದೆಹಲಿಯಲ್ಲಿ ಪೆಟ್ರೋಲ್​​ ಮೇಲಿನ ವ್ಯಾಟ್​ ಕಡಿತಗೊಳಿಸಿದ ಕೇಜ್ರಿವಾಲ್​ ಸರ್ಕಾರ; ಪ್ರತಿ ಲೀಟರ್​ಗೆ 8 ರೂ.ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Dec 01, 2021 | 1:11 PM

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಹನ ಸವಾರರಿಗೆ ಅಲ್ಲಿನ ಆಪ್​ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಪೆಟ್ರೋಲ್​​ ಮೇಲಿನ ವ್ಯಾಟ್​​ನ್ನು (ಮೌಲ್ಯವರ್ಧಿತ ತೆರಿಗೆ-Value Added Tax ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಈ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​​ ಬೆಲೆ 8 ರೂ.ಕಡಿಮೆ ಮಾಡಿದೆ.  ಇಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಪೆಟ್ರೋಲ್​-ಡೀಸೆಲ್ ಬೆಲೆ ಒಂದೇ ಸಮ ಏರಿಕೆಯಾಗುತ್ತಿದ್ದ ಬೆನ್ನಲ್ಲೇ ಕಳೆದ ತಿಂಗಳು ದೀಪಾವಳಿ ಎದುರು ಕೇಂದ್ರ ಸರ್ಕಾರ ಒಂದು ಶುಭ ಸಮಾಚಾರ ನೀಡುವ ಮೂಲಕ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆ ಮಾಡಿತ್ತು. ಪೆಟ್ರೋಲ್​ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್​ಗೆ 5 ರೂಪಾಯಿ ಮತ್ತು ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್​ಗೆ 10 ರೂ.ಕಡಿತಗೊಳಿಸಿತ್ತು.  ಅದಾದ ಬಳಿಕ ಕರ್ನಾಟಕ ಸೇರಿ ಬಿಜೆಪಿ ಸರ್ಕಾರ ಇರುವ ಇತರ ರಾಜ್ಯಗಳೂ ಪೆಟ್ರೋಲ್​-ಡೀಸೆಲ್​ ಬೆಲೆ ಇಳಿಕೆ ಮಾಡಿದ್ದವು. ಅದರಲ್ಲೂ ಕರ್ನಾಟಕದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ತಲಾ 7 ರೂಪಾಯಿ ಕಡಿಮೆ ಮಾಡಲಾಗಿತ್ತು. ಇಂದು ದೆಹಲಿ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​​ನ್ನು ಮಾತ್ರ ಕಡಿಮೆ ಗೊಳಿಸಿದೆ ಹೊರತು ಡೀಸೆಲ್​ಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ದೆಹಲಿಯಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 103.97 ರೂ.ಇತ್ತು. ಇದೀಗ ಸರ್ಕಾರ 8 ರೂಪಾಯಿ ಕಡಿತಗೊಳಿಸಿದ್ದರಿಂದ ಬೆಲೆ 95.97ರೂ.ಗೆ ಇಳಿದಿದೆ.

ಇಂಡಿಯನ್ ಆಯಿಲ್​ ಕಾರ್ಪೋರೇಶನ್​ ವೆಬ್​ಸೈಟ್​​ನಲ್ಲಿ ಉಲ್ಲೇಖವಾಗಿರುವ ಪ್ರಕಾರ ದೆಹಲಿಯಲ್ಲಿ ವ್ಯಾಟ್​ ಹೊರತಾದ ಪೆಟ್ರೋಲ್​ ಬೆಲೆ ಲೀಟರ್​ಗೆ 79.98 ರೂಪಾಯಿ ಇದೆ. ವ್ಯಾಟ್​ ಮೌಲ್ಯ 23.99 ರೂ.ಆಗಿತ್ತು. ಇದೀಗ ಅದರಲ್ಲಿ ಕಡಿತವಾಗಿದ್ದು, 15.52ರೂ.ಗೆ ಇಳಿಕೆಯಾಗಿದೆ.  ಇನ್ನೊಂದೆಂದರೆ ಸುತ್ತಲಿನ ಉತ್ತರಪ್ರದೇಶ, ಹರ್ಯಾಣಗಳಿಗೆ ಹೋಲಿಸಿದರೆ ದೆಹಲಿಯಲ್ಲಿ ಪೆಟ್ರೋಲ್​ ಬೆಲೆ ಹೆಚ್ಚಿತ್ತು. ಅದರಲ್ಲೂ ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದಾಗಲೇ ಉತ್ತರಪ್ರದೇಶ ಮತ್ತು ಹರ್ಯಾಣದ ಬಿಜೆಪಿ ಸರ್ಕಾರಗಳೂ ವ್ಯಾಟ್​ ಕಡಿತಗೊಳಿಸಿದ್ದವು.  ಇದೀಗ ಆ ಸಾಲಿಗೆ ದೆಹಲಿಯೂ ಸೇರ್ಪಡೆಯಾಗಿದೆ.

ಇಂದು ಡಿಸೆಂಬರ್​ 1ರಂದು ಭಾರತದ ತೈಲ ಕಂಪನಿಗಳು ಪೆಟ್ರೋಲ್​-ಡೀಸೆಲ್​ಗಳ ಹೊಸ ದರ ಬಿಡುಗಡೆ ಮಾಡಿವೆ. ಆದರೆ ಯಾವುದೇ ಬದಲಾವಣೆಯಾಗಿಲ್ಲ. ಕಳೆದ 27ದಿನಗಳಿಂದಲೂ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರವಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 100.65 ರೂಪಾಯಿ ಹಾಗೂ ಲೀಟರ್ ಡೀಸೆಲ್ 85.08 ರೂ.ಇದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದ ಪ್ರಕರಣ; ಉಡುಪಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ

Petrol Price Today: ಸತತ 27 ದಿನಗಳಿಂದ ಪೆಟ್ರೋಲ್​, ಡೀಸೆಲ್​ ದರ ಸ್ಥಿರ!

Published On - 1:09 pm, Wed, 1 December 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ