ದೆಹಲಿ: ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿಯ ಅಮಾನತು

|

Updated on: Aug 21, 2023 | 1:26 PM

ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ದೆಹಲಿ: ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿಯ ಅಮಾನತು
Image Credit source: India Today
Follow us on

ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅಮಾನತುಗೊಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು ಆಕೆ ಈಗ ಗರ್ಭಿಣಿಯಾಗಿದ್ದಾಳೆ. ಆಕೆಯ ತಂದೆ ಅಕ್ಟೋಬರ್ 1, 2020 ರಂದು ನಿಧನರಾದ ನಂತರ ಬಾಲಕಿ ಈ ಆರೋಪಿಯೊಂದಿಗೆ ವಾಸಿಸುತ್ತಿದ್ದಳು.

ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ ಕಾಯ್ದೆ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಅಧಿಕಾರಿಯನ್ನು ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉಪ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.
ಆಕೆ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2020ರಲ್ಲಿ ದೆಹಲಿಯ ಚರ್ಚ್​ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು. ಆಕೆ ಆ ಸಮಯದಲ್ಲಿ ತಂದೆಯನ್ನು ಕಳೆದುಕೊಂಡ ನೋವಿನಲ್ಲಿದ್ದಳು.

ಮತ್ತಷ್ಟು ಓದಿ: ಸ್ನೇಹಿತನ ಹದಿಹರೆಯದ ಮಗಳ ಮೇಲೆ ಅತ್ಯಾಚಾರವೆಸಗಿದ ದೆಹಲಿ ಅಧಿಕಾರಿ, ಗರ್ಭಪಾತಕ್ಕೆ ಪತ್ನಿ ಸಹಕಾರ: ಕೇಸು ದಾಖಲು

ಆರೋಪಿ ಅಧಿಕಾರಿ ಸಂತ್ರಸ್ತೆಯ ಭಾವನಾತ್ಮಕ ದೌರ್ಬಲ್ಯದ ಲಾಭ ಪಡೆದು ಆಕೆಯೊಂದಿಗೆ ಸಂಬಂಧ ಬೆಳೆಸಿದ್ದ. ಆರೋಪಿ ಸಂತ್ರಸ್ತೆಯೊಂದಿಗೆ ಮನೆಗೆ ಬರಲಾರಂಭಿಸಿದ. ಎಫ್ಐಆರ್ ಪ್ರಕಾರ, ಉಪ ನಿರ್ದೇಶಕ 2020 ರಿಂದ 2021 ರ ಅವಧಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಸಂತ್ರಸ್ತೆ ಗರ್ಭಿಣಿಯಾದಳು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ