Delhi Firecrackers Ban: ದೆಹಲಿ ವಾಯುಮಾಲಿನ್ಯ, ಮುಂದಿನ ವರ್ಷದವರೆಗೆ ಪಟಾಕಿ ನಿಷೇಧ
ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2025 ಜನವರಿ 1 ರವರೆಗೆ ಪಟಾಕಿ ನಿಷೇಧ ಮಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ರಾಜಧಾನಿ ಪ್ರದೇಶದಲ್ಲಿ ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ದೆಹಲಿ ಸರ್ಕಾರ ಜಾರಿಗೆ ತಂದಿರುವ ಈ ನಿಷೇಧವು ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದವರೆಗೆ ಪಟಾಕಿ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜಧಾನಿ ಪ್ರದೇಶದಲ್ಲಿ ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ದೆಹಲಿ ಸರ್ಕಾರ ಜಾರಿಗೆ ತಂದಿರುವ ಈ ನಿಷೇಧವು ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ.
ಅವಧಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಆನ್‌ಲೈನ್ ವ್ಯಾಪಾರ ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಸೋಮವಾರ ಈ ಸಂಬಂಧ ಅಗತ್ಯ ಆದೇಶ ಹೊರಡಿಸಲಾಗಿದೆ. ವಾಯುಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 31(ಎ) ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ದೆಹಲಿ ಸರ್ಕಾರ ಪಟಾಕಿಗಳ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ನಿಷೇಧ ಜಾರಿ ಮಾಡಲು ಎಲ್ಲರೂ ಸಹಕರಿಸಬೇಕು ದೆಹಲಿ ಸರ್ಕಾರದ ಪರಿಸರ ಮತ್ತು ಅರಣ್ಯ ಸಚಿವ ಗೋಪಾಲ್ ರೈ ಅವರು ಸೋಮವಾರ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ, ಚಳಿಗಾಲದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ದೃಷ್ಟಿಯಿಂದ, ಪಟಾಕಿ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವು ಇಂದಿನಿಂದ ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ.
ಪಟಾಕಿ ನಿಷೇಧದ ಬಗ್ಗೆಯೂ ಇಲಾಖಾ ಆದೇಶ ಹೊರಡಿಸಲಾಗಿದೆ. ಈ ವಿಚಾರವಾಗಿ ದೆಹಲಿಯ ಜನತೆ ಸಹಕಾರ ನೀಡುವಂತೆ ಗೋಪಾಲ್ ರೈ ಮನವಿ ಮಾಡಿದ್ದಾರೆ. ಇದರಿಂದ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಬರದಂತೆ ತಡೆಯಬಹುದು.
ಮತ್ತಷ್ಟು ಓದಿ: ರಾಜ್ಯದ 4 ಜಿಲ್ಲೆಗಳಲ್ಲಿ 2030ಕ್ಕೆ ವಾಯು ಮಾಲಿನ್ಯ ಶೇ38 ರಷ್ಟು ಹೆಚ್ಚಳ ಸಾಧ್ಯತೆ
ಮಾಲಿನ್ಯ ನಿಯಂತ್ರಣಕ್ಕಾಗಿ 21 ಫೋಕಸ್ ಪಾಯಿಂಟ್‌ಗಳ ಆಧಾರದ ಮೇಲೆ ಚಳಿಗಾಲದ ಕ್ರಿಯಾ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ. ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ಹೇಳಲಾಗಿದೆ.
ಮಾಲಿನ್ಯದ ದೃಷ್ಟಿಯಿಂದ ದೆಹಲಿ ಪೊಲೀಸ್, ಡಿಪಿಸಿಸಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆ ಮಾಡಲಾಗುವುದು ಎಂದು ಗೋಪಾಲ್ ರೈ ಹೇಳಿದರು.
ದೀಪಾವಳಿಗೆ ಕೇವಲ 17 ದಿನಗಳ ಮೊದಲು ಈ ಘೋಷಣೆ ಮಾಡಲಾಗಿದೆ. ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ಕಳಪೆ ವಿಭಾಗದಲ್ಲಿ ದಾಖಲಾಗಿದೆ. ಕಳೆದ ವರ್ಷ ಎಎಪಿ ಸರ್ಕಾರವು ದೀಪಾವಳಿಯ ಮುಂಚೆಯೇ ಪಟಾಕಿಯನ್ನು ನಿಷೇಧಿಸುವುದಾಗಿ ಘೋಷಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ