ಮದುವೆಗೆ ಕೆಲವೇ ಗಂಟೆಗಳಿರುವಾಗ ಜಿಮ್ ಟ್ರೈನರ್ನನ್ನು ಚಾಕುವಿನಿಂದ ಇರಿದು ಕೊಂದ ತಂದೆ
ತಂದೆಯೇ ಮಗನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮದುವೆ ಗೆಲವೇ ಗಂಟೆಗಳು ಬಾಕಿ ಇರುವಾಗ ಈ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದ ಗೌರವ್ ಎಂಬಾತನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ.
ಮದುವೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗ ಜಿಮ್ ಟ್ರೈನರ್ನನ್ನು ತಂದೆಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 29 ವರ್ಷ ವಯಸ್ಸಿನ ಜಿಮ್ ಟ್ರೈನರ್ನನ್ನು ದಕ್ಷಿಣ ದೆಹಲಿಯಲ್ಲಿರುವ ಮನೆಯಲ್ಲಿ ಮುಂಜಾನೆ, ಮದುವೆಗೂ ಕೆಲವೇ ಗಂಟೆಗಳ ಮೊದಲು ಅವರ ಎದೆಗೆ 15 ಬಾರಿ ಇರಿಯಲಾಗಿದೆ. ಕೊಲೆಯ ಪ್ರಮುಖ ಆರೋಪಿಯಾಗಿರುವ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಮೃತ ಗೌರವ್ ಸಿಂಘಾಲ್ ಅವರ ಕಿರಿಯ ಸಹೋದರ ಮತ್ತು ಸಂಬಂಧಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಎಲ್ಲಾ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಇಲ್ಲಿಯವರೆಗೆ, ತಂದೆ ಮತ್ತು ಮಗನ ನಡುವೆ ವೈಮನಸ್ಸು ಇತ್ತು ಎಂದಷ್ಟೇ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿಯ ಬಂಧನದ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಅಧಿಕಾರಿ ಹೇಳಿದರು. ಮಧ್ಯರಾತ್ರಿ 12.30ರ ಸುಮಾರಿಗೆ ಘಟನೆಯ ಬಗ್ಗೆ ಪೊಲೀಸರಿಗೆ ಕರೆ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾಣ್ ಹೇಳಿದ್ದಾರೆ.
ಹಲ್ಲೆ ಬಳಿಕ ಸಿಂಘಾಲ್ ಅವರ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಿಂಘಾಲ್ ಅವರ ವಿವಾಹ ಸಮಾರಂಭವು ಗುರುವಾರ ನಿಗದಿಯಾಗಿತ್ತು ಎಂದು ಡಿಸಿಪಿ ಹೇಳಿದರು.
ಮತ್ತಷ್ಟು ಓದಿ: ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ.
ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಮತ್ತು ಅದನ್ನು ಮೊದಲೇ ಮಾಡಬೇಕಿತ್ತು ಎಂದು ಆರೋಪಿ ಪೊಲೀಸರಿಗೆ ಹೇಳಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
ಸಿಂಘಾಲ್ ಮುಖಕ್ಕೆ ಮತ್ತು ಎದೆಗೆ 15ಕ್ಕೂ ಹೆಚ್ಚು ಬಾರಿ ಇರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾವು ಪ್ರತಿ ಕೋನದಿಂದ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಮುಖ್ಯ ಉದ್ದೇಶದ ಹಿಂದೆ ಕೆಲವು ಪ್ರಮುಖ ಸುಳಿವುಗಳನ್ನು ಹೊಂದಿದ್ದೇವೆ. ಐದಕ್ಕೂ ಹೆಚ್ಚು ವಿಭಿನ್ನ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಕೊಠಡಿಯಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ಗಾತ್ರದ ಹಲವಾರು ಶೂ ಗುರುತುಗಳನ್ನು ಪತ್ತೆಹಚ್ಚಿದ್ದಾರೆ, ಇದು ಕೊಲೆಯಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಿದ್ದಾರೆ.
ಗೌರವ್ಗೆ ವಿವಾಹವಾಗಲು ಇಷ್ಟವಿರಲಿಲ್ಲ, ಆದರೆ ಆತನ ತಂದೆ ಒತ್ತಡ ಹೇರುತ್ತಿದ್ದರು ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಿಂಘಾಲ್ ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿದ್ದರು ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದರು. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ