AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್ ಮತ್ತು ಇತರ 23 ಜನರಿಗೆ ಹೈಕೋರ್ಟ್ ನೋಟಿಸ್

ದೆಹಲಿ ಅಬಕಾರಿ ನೀತಿ ಹಗರಣದ ಸಿಬಿಐ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣಾ ನ್ಯಾಯಾಲಯವು ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಿಬಿಐ ಅರ್ಜಿಯನ್ನು ಹೈಕೋರ್ಟ್ ಆಲಿಸುವವರೆಗೆ ಇಡಿ ಪ್ರಕರಣವನ್ನು ಮುಂದೂಡುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಅಬಕಾರಿ ನೀತಿಯಲ್ಲಿ ಯಾವುದೇ ಪಿತೂರಿ ಇರಲಿಲ್ಲ ಎಂದು ಫೆಬ್ರವರಿ 27 ರಂದು ದೆಹಲಿ ನ್ಯಾಯಾಲಯ ಕೇಜ್ರಿವಾಲ್ ಸೇರಿದಂತೆ ಇತರರನ್ನು ಖುಲಾಸೆಗೊಳಿಸಿತ್ತು.

ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್ ಮತ್ತು ಇತರ 23 ಜನರಿಗೆ ಹೈಕೋರ್ಟ್ ನೋಟಿಸ್
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on: Mar 09, 2026 | 1:49 PM

Share

ನವದೆಹಲಿ, ಮಾರ್ಚ್​ 09: ದೆಹಲಿಯ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್(Arvind Kejriwal) ಮತ್ತು ರೌಸ್ ಅವೆನ್ಯೂ ನ್ಯಾಯಾಲಯದಿಂದ ಖುಲಾಸೆಗೊಂಡ ಎಲ್ಲಾ 23 ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯವು ಈಗ ಮಾರ್ಚ್ 16 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ತಡೆಹಿಡಿದಿದೆ.

ಸೋಮವಾರ, ಸಿಬಿಐ ಅರ್ಜಿಯ ನಂತರ ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ಬಿಡುಗಡೆ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತು. ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸಿಬಿಐ ಪರವಾಗಿ ವಾದ ಮಂಡಿಸಿದ ಎಸ್‌ಜಿ ತುಷಾರ್ ಮೆಹ್ತಾ, ಕೇಜ್ರಿವಾಲ್ ಮತ್ತು ಸಿಸೋಡಿಯಾ ಸೇರಿದಂತೆ ಇತರ 23 ಜನರ ಬಿಡುಗಡೆ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ನ್ಯಾಯಾಲಯ ಈ ಆದೇಶವನ್ನು ನೀಡಲು ನಿರಾಕರಿಸಿತು.

ಎಲ್ಲಾ ಆರೋಪಿಗಳ ಬಿಡುಗಡೆಯ ವಿರುದ್ಧ ಸಿಬಿಐ ಸಲ್ಲಿಸಿದ ಪರಿಷ್ಕರಣಾ ಅರ್ಜಿಯನ್ನು ಹೈಕೋರ್ಟ್ ನಿರ್ಧರಿಸುವವರೆಗೆ ಇಡಿ ಪ್ರಕರಣವನ್ನು ಮುಂದೂಡುವಂತೆ ನ್ಯಾಯಮೂರ್ತಿ ವಿಚಾರಣಾ ನ್ಯಾಯಾಲಯವನ್ನು ಕೇಳಿದ್ದಾರೆ.

ಮತ್ತಷ್ಟು ಓದಿ:

ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ನೋಟಿಸ್ ಜಾರಿಗೊಳಿಸಿ, ಸಿಬಿಐ ಮನವಿಯನ್ನು ಹೈಕೋರ್ಟ್ ಆಲಿಸುವವರೆಗೆ ಜಾರಿ ನಿರ್ದೇಶನಾಲಯದ ಹಣ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದರು. ಈ ಪ್ರಕರಣದಲ್ಲಿ ದೋಷಮುಕ್ತರಾದ ಎಲ್ಲರಿಗೂ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ತನಿಖಾಧಿಕಾರಿಯ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ವಿಚಾರಣಾ ನ್ಯಾಯಾಲಯವು ಈ ಹಿಂದೆ ಶಿಫಾರಸು ಮಾಡಿತ್ತು.

ಫೆಬ್ರವರಿ 27 ರಂದು, ದೆಹಲಿ ನ್ಯಾಯಾಲಯವು ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿತು, ಅಬಕಾರಿ ನೀತಿಯಲ್ಲಿ ಯಾವುದೇ ಪಿತೂರಿ ಅಥವಾ ಕ್ರಿಮಿನಲ್ ಉದ್ದೇಶ ಇರಲಿಲ್ಲ ಎಂಬುದನ್ನು ಗಮನಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ