Delhi: ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಮಹಿಳೆ ಸಾವು

ದೆಹಲಿಯಲ್ಲಿ ನಿನ್ನೆಯಿಂದ ವಿಪರೀತ ಮಳೆ ಸುರಿಯುತ್ತಿದೆ, ರೈಲು ನಿಲ್ದಾಣವೊಂದರಲ್ಲಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ.

Delhi: ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಮಹಿಳೆ ಸಾವು
ಸಾಕ್ಷಿ ಅಹುಜಾ
Image Credit source: NDTV

Updated on: Jun 25, 2023 | 1:00 PM

ದೆಹಲಿಯಲ್ಲಿ ನಿನ್ನೆಯಿಂದ ವಿಪರೀತ ಮಳೆ ಸುರಿಯುತ್ತಿದೆ, ರೈಲು ನಿಲ್ದಾಣವೊಂದರಲ್ಲಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಅವರು ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ನಿಂತಿದ್ದ ನೀರಿನಲ್ಲಿ ಮುಂದೆ ಹೋಗಲು ವಿದ್ಯುತ್ ಕಂಬವನ್ನು ಆಧಾರವಾಗಿ ಹಿಡಿದುಕೊಂಡಿದ್ದಾರೆ, ಆಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.

ತಕ್ಷಣವೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸುವ ಪ್ರಯತ್ನ ಮಾಡಿದ್ದಾರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ರೈಲ್ವೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದೆ. ಮಳೆಗಾಲದಲ್ಲಿ ಎಲ್ಲೆಡೆಯೂ ವಿದ್ಯುತ್ ಪ್ರವಹಿಸುವ ಅಪಾಯವಿದ್ದು, ಮಕ್ಕಳು ಕೂಡ ತುಂಬಾ ಎಚ್ಚರಿಕೆಯಿಂದಿರಬೇಕು.

ನೈಋತ್ಯ  ಮುಂಗಾರು ಸಾಮಾನ್ಯವಾಗಿ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಮೊದಲು ಆವರಿಸುತ್ತದೆ. ಇದರಿಂದಾಗಿ ದಕ್ಷಿಣದಲ್ಲಿ ಮೊದಲು ಮಳೆಯಾಗುತ್ತದೆ ಮತ್ತು ನಂತರ ನೈಋತ್ಯ ಕರಾವಳಿಯಿಂದ ಮುಂದಕ್ಕೆ ಚಲಿಸುತ್ತದೆ. ಇದರ ನಂತರ ದೇಶದಾದ್ಯಂತ ಮಳೆ ಪ್ರಾರಂಭವಾಗುತ್ತದೆ.

ಮತ್ತಷ್ಟು ಓದಿ: Bagalkot News: ಬಾಗಲಕೋಟೆಯಲ್ಲಿ ಭಾರೀ ಮಳೆ; ಮುಧೋಳ ಬಿಕೆ ಆಲಗುಂಡಿ ಬಳಿ ಸಿಡಿಲು ಬಡಿದು ರೈತ ಸಾವು, ಮತ್ತೊಬ್ಬರಿಗೆ ಗಾಯ

ದೇಶದ ಹಲವು ರಾಜ್ಯಗಳಲ್ಲಿ ವರ್ಷದಲ್ಲಿ ಮಳೆಯ ಪ್ರಮಾಣ ಅಸಹಜವಾಗಿಯೇ ಇರುತ್ತದೆ. ಮಹಾರಾಷ್ಟ್ರ, ಬಿಹಾರ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು, ಕಾಶ್ಮೀರ ಮತ್ತು ಲಡಾಖ್, ಚಂಡೀಗಢ ಮತ್ತು ದೆಹಲಿ ಸೇರಿದಂತೆ ಹರಿಯಾಣದ ಕೆಲವು ಭಾಗಗಳು ಸೇರಿದಂತೆ ಮುಂಬೈ, ಮಧ್ಯಪ್ರದೇಶ, ಉತ್ತರ ಪ್ರದೇಶಕ್ಕೆ ಮುಂಗಾರು ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಈಗ ಅನುಕೂಲಕರವಾಗಿವೆ. ಮುಂದಿನ 48 ಗಂಟೆಗಳಲ್ಲಿ ಗುಜರಾತ್, ಪೂರ್ವ ರಾಜಸ್ಥಾನ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ