AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಮನೀಶ್ ಸಿಸೋಡಿಯಾಗೆ ದೆಹಲಿ ಹೈಕೋರ್ಟ್ ಅನುಮತಿ

ಈ ತಿಂಗಳ ಆರಂಭದಲ್ಲಿ, ಮನೀಶ್ ಸಿಸೋಡಿಯಾ ಮತ್ತು ಅವರ ಅನಾರೋಗ್ಯದ ಪತ್ನಿ ನಡುವೆ ಪ್ರತಿ ಪರ್ಯಾಯ ದಿನದಲ್ಲಿ ಒಂದು ಗಂಟೆಗಳ ಕಾಲ ವಿಡಿಯೊ ಕರೆಗಳನ್ನು ಅನುಮತಿಸುವಂತೆ ತಿಹಾರ್ ಜೈಲು ಅಧೀಕ್ಷಕರಿಗೆ ಹೈಕೋರ್ಟ್ ನಿರ್ದೇಶನ ನೀಡಿತು

ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಮನೀಶ್ ಸಿಸೋಡಿಯಾಗೆ ದೆಹಲಿ ಹೈಕೋರ್ಟ್ ಅನುಮತಿ
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 02, 2023 | 8:45 PM

Share

ದೆಹಲಿ: ದೆಹಲಿ ಮದ್ಯದ ಹಗರಣಕ್ಕೆ (Delhi liquor scam) ಸಂಬಂಧಿಸಿದಂತೆ ಫೆಬ್ರವರಿಯಿಂದ ಜೈಲಿನಲ್ಲಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗುವುದಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್ ನಿಂದ ಬಳಲುತ್ತಿರುವ ಪತ್ನಿಯನ್ನು ಶನಿವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ (Delhi High Court) ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರಿಗೆ ಅನುಮತಿ ನೀಡಿದೆ. ಯಾವುದೇ ಗ್ಯಾಜೆಟ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಮಾಧ್ಯಮದೊಂದಿಗೆ ಯಾವುದೇ ಸಂವಾದ ನಡೆಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ,

ಎಎಪಿ ನಾಯಕ, ತಮ್ಮ ಪತ್ನಿಯ ಆರೋಗ್ಯವನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿದ್ದರು.. ಆರ್ಥಿಕ ಅಪರಾಧಗಳ ತನಿಖೆ ನಡೆಸುವ ಸಂಸ್ಥೆಯಾದ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ.

ಏತನ್ಮಧ್ಯೆ, ಎಎಪಿ ನಾಯಕನ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಇಂದು ಕಾಯ್ದಿರಿಸಿದೆ.

ಈ ತಿಂಗಳ ಆರಂಭದಲ್ಲಿ, ಮನೀಶ್ ಸಿಸೋಡಿಯಾ ಮತ್ತು ಅವರ ಅನಾರೋಗ್ಯದ ಪತ್ನಿ ನಡುವೆ ಪ್ರತಿ ಪರ್ಯಾಯ ದಿನದಲ್ಲಿ ಒಂದು ಗಂಟೆಗಳ ಕಾಲ ವಿಡಿಯೊ ಕರೆಗಳನ್ನು ಅನುಮತಿಸುವಂತೆ ತಿಹಾರ್ ಜೈಲು ಅಧೀಕ್ಷಕರಿಗೆ ಹೈಕೋರ್ಟ್ ನಿರ್ದೇಶನ ನೀಡಿತು.

ಸೋಮವಾರ, ದೆಹಲಿ ಹೈಕೋರ್ಟ್ ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿದ್ದು, ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು. ಈ ವಿಷಯದಲ್ಲಿ ಎಫ್‌ಐಆರ್ ದಾಖಲಾದ ಆರು ತಿಂಗಳ ನಂತರ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮೊದಲು ಬಂಧಿಸಿತು. ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಇದೇ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತು.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ಮದ್ಯ ನೀತಿಯನ್ನು ಜಾರಿಗೆ ತಂದಿತ್ತು.ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು. ಮನೀಶ್ ಸಿಸೋಡಿಯಾ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಎರಡೂ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ