ಅರವಿಂದ್ ಕೇಜ್ರಿವಾಲ್ ಅವರ ಕೋರ್ಟ್​ ವಿಡಿಯೋ ಡಿಲೀಟ್ ಮಾಡಿ; ಸುನಿತಾ ಕೇಜ್ರಿವಾಲ್​ಗೆ ದೆಹಲಿ ಹೈಕೋರ್ಟ್ ಸೂಚನೆ

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ವಿಡಿಯೋ ಕಾನ್ಫರೆನ್ಸಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವನ್ನು ಕೋರಿ ಮನವಿ ಸಲ್ಲಿಸಿದ ನಂತರ ಈ ತೀರ್ಪು ಬಂದಿದೆ. ಆಪಾದಿತ ಮದ್ಯ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರ ಕೋರ್ಟ್​ ವಿಡಿಯೋ ಡಿಲೀಟ್ ಮಾಡಿ; ಸುನಿತಾ ಕೇಜ್ರಿವಾಲ್​ಗೆ ದೆಹಲಿ ಹೈಕೋರ್ಟ್ ಸೂಚನೆ
ಸುನಿತಾ ಕೇಜ್ರಿವಾಲ್
Follow us
|

Updated on:Jun 15, 2024 | 12:44 PM

ನವದೆಹಲಿ: ದೆಹಲಿಯ ನ್ಯಾಯಾಲಯವನ್ನು (Delhi High Court) ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮಾತನಾಡುತ್ತಿರುವ ವಿಡಿಯೋ ರೆಕಾರ್ಡಿಂಗ್ ಅನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ತೆಗೆದುಹಾಕುವಂತೆ ಸುನಿತಾ ಕೇಜ್ರಿವಾಲ್​ಗೆ (Sunita Kejriwal) ದೆಹಲಿ ಹೈಕೋರ್ಟ್ ಆದೇಶಿಸಿದೆ. ಆ ವಿಡಿಯೋಗೆ ಲಿಂಕ್ ಮಾಡಿದ ಪೋಸ್ಟ್‌ಗಳನ್ನು ಕೂಡ ತೆಗೆದುಹಾಕುವಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನ್ಯಾಯಾಲಯ ಆದೇಶಿಸಿದೆ.

ಮಾರ್ಚ್ 28ರಂದು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿದಾಗ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮ ಕೋರಿ ವಕೀಲ ವೈಭವ್ ಸಿಂಗ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎಲ್ಲಾ ಕಕ್ಷಿದಾರರಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.

ಆ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕಲು ಸೂಚಿಸಲಾದ ಐವರು ವ್ಯಕ್ತಿಗಳಲ್ಲಿ ಸುನಿತಾ ಕೇಜ್ರಿವಾಲ್ ಕೂಡ ಒಬ್ಬರು. ದೆಹಲಿ ಹೈಕೋರ್ಟ್ ಜುಲೈ 9ರಂದು ಈ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ: G7 Summit: ಇಟಲಿಯ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ; ಇಲ್ಲಿದೆ ಹೈಲೈಟ್ಸ್

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಎರಡನೇ ಬಾರಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅರವಿಂದ್ ಕೇಜ್ರಿವಾಲ್ ಮಾರ್ಚ್ 28 ರಂದು ವಿಶೇಷ ನ್ಯಾಯಾಧೀಶ (ಪಿಸಿ ಕಾಯಿದೆ) ಕಾವೇರಿ ಬವೇಜಾ ಅವರನ್ನು ವೈಯಕ್ತಿಕವಾಗಿ ಉದ್ದೇಶಿಸಿ ಮಾತನಾಡಿದ್ದರು. ಆ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಸುನೀತಾ ಕೇಜ್ರಿವಾಲ್ ಆ ದೃಶ್ಯಗಳನ್ನು ರಿಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ವಜಾ; ಜೂನ್ 19ರವರೆಗೆ ನ್ಯಾಯಾಂಗ ಬಂಧನ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಮಾರ್ಚ್ 28ರಂದು ನ್ಯಾಯಾಲಯವನ್ನು ಉದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಅವರ ಪೋಸ್ಟ್‌ಗಳು, ರೀ-ಪೋಸ್ಟ್‌ಗಳನ್ನು ಡಿಲೀಟ್ ಮಾಡಲು ದೆಹಲಿ ಹೈಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ.

ಸುನಿತಾ ಕೇಜ್ರಿವಾಲ್, ಎಎಪಿ ಮತ್ತು ಕೆಲವು ವಿರೋಧ ಪಕ್ಷಗಳ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ನ್ಯಾಯಾಲಯದ ಕಲಾಪಗಳ ವೀಡಿಯೊದ ನಕಲುಗಳನ್ನು ಮಾಡಿ ಅದನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Sat, 15 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!