ನವದೆಹಲಿ: ದೆಹಲಿಯ ನ್ಯಾಯಾಲಯವನ್ನು (Delhi High Court) ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮಾತನಾಡುತ್ತಿರುವ ವಿಡಿಯೋ ರೆಕಾರ್ಡಿಂಗ್ ಅನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ತೆಗೆದುಹಾಕುವಂತೆ ಸುನಿತಾ ಕೇಜ್ರಿವಾಲ್ಗೆ (Sunita Kejriwal) ದೆಹಲಿ ಹೈಕೋರ್ಟ್ ಆದೇಶಿಸಿದೆ. ಆ ವಿಡಿಯೋಗೆ ಲಿಂಕ್ ಮಾಡಿದ ಪೋಸ್ಟ್‌ಗಳನ್ನು ಕೂಡ ತೆಗೆದುಹಾಕುವಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನ್ಯಾಯಾಲಯ ಆದೇಶಿಸಿದೆ.
ಮಾರ್ಚ್ 28ರಂದು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿದಾಗ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮ ಕೋರಿ ವಕೀಲ ವೈಭವ್ ಸಿಂಗ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎಲ್ಲಾ ಕಕ್ಷಿದಾರರಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.
Delhi High Court issues notice to all the parties including Sunita Kejriwal (wife of Delhi CM Arvind Kejriwal), several indivisible, Facebook, YouTube and other social media platforms on a plea seeking action for violating the court’s video conferencing rules when Delhi CM Arvind…
— ANI (@ANI) June 15, 2024
ಆ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕಲು ಸೂಚಿಸಲಾದ ಐವರು ವ್ಯಕ್ತಿಗಳಲ್ಲಿ ಸುನಿತಾ ಕೇಜ್ರಿವಾಲ್ ಕೂಡ ಒಬ್ಬರು. ದೆಹಲಿ ಹೈಕೋರ್ಟ್ ಜುಲೈ 9ರಂದು ಈ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದೆ.
ಇದನ್ನೂ ಓದಿ: G7 Summit: ಇಟಲಿಯ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ; ಇಲ್ಲಿದೆ ಹೈಲೈಟ್ಸ್
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಎರಡನೇ ಬಾರಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅರವಿಂದ್ ಕೇಜ್ರಿವಾಲ್ ಮಾರ್ಚ್ 28 ರಂದು ವಿಶೇಷ ನ್ಯಾಯಾಧೀಶ (ಪಿಸಿ ಕಾಯಿದೆ) ಕಾವೇರಿ ಬವೇಜಾ ಅವರನ್ನು ವೈಯಕ್ತಿಕವಾಗಿ ಉದ್ದೇಶಿಸಿ ಮಾತನಾಡಿದ್ದರು. ಆ ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಸುನೀತಾ ಕೇಜ್ರಿವಾಲ್ ಆ ದೃಶ್ಯಗಳನ್ನು ರಿಟ್ವೀಟ್ ಮಾಡಿದ್ದರು.
ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ವಜಾ; ಜೂನ್ 19ರವರೆಗೆ ನ್ಯಾಯಾಂಗ ಬಂಧನ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಮಾರ್ಚ್ 28ರಂದು ನ್ಯಾಯಾಲಯವನ್ನು ಉದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಅವರ ಪೋಸ್ಟ್‌ಗಳು, ರೀ-ಪೋಸ್ಟ್‌ಗಳನ್ನು ಡಿಲೀಟ್ ಮಾಡಲು ದೆಹಲಿ ಹೈಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ.
ಸುನಿತಾ ಕೇಜ್ರಿವಾಲ್, ಎಎಪಿ ಮತ್ತು ಕೆಲವು ವಿರೋಧ ಪಕ್ಷಗಳ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ನ್ಯಾಯಾಲಯದ ಕಲಾಪಗಳ ವೀಡಿಯೊದ ನಕಲುಗಳನ್ನು ಮಾಡಿ ಅದನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:42 pm, Sat, 15 June 24