ಮದ್ಯ ನೀತಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

|

Updated on: May 21, 2024 | 8:11 PM

ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಪರಿಗಣಿಸಲು ಸಾಧ್ಯವಿಲ್ಲ ಎಂಬ ದೆಹಲಿಯ ಮಾಜಿ ಉಪಮುಖ್ಯಮಂತ್ರಿಯವರ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಜಾಮೀನಿಗೆ "ಅನರ್ಹರು" ಎಂದು ಹೇಳಿದೆ. ಅರ್ಜಿಯನ್ನು ಅರ್ಹತೆಯ ಮೇಲೆ ಪರಿಗಣಿಸುವ ಕೆಳ ನ್ಯಾಯಾಲಯಗಳ ಹಕ್ಕನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿಲ್ಲ ಎಂದು ನ್ಯಾಯಾಲಯ ಹೇಳಿದೆ

ಮದ್ಯ ನೀತಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್
ಮನೀಶ್ ಸಿಸೋಡಿಯಾ
Follow us on

ದೆಹಲಿ ಮೇ 21: ದೆಹಲಿ ಅಬಕಾರಿ ನೀತಿ (Delhi excise policy) 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ (AAP) ನಾಯಕ ಮನೀಶ್ ಸಿಸೋಡಿಯಾಗೆ (Manish Sisodia) ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ವಿಸ್ತರಿಸಿದ ಒಂದು ದಿನದ ನಂತರ ಉಚ್ಚ ನ್ಯಾಯಾಲಯದ ಈ ನಿರ್ಧಾರವು ಬಂದಿದೆ. ಆರೋಪದ ಮೇಲಿನ ವಾದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಲು ಮತ್ತು ವಿಚಾರಣಾ ನ್ಯಾಯಾಲಯದ ಕಡೆಯಿಂದ ಪ್ರಾಸಿಕ್ಯೂಷನ್‌ನ ಭಾಗದಿಂದ ಯಾವುದೇ ವಿಳಂಬವಾಗಿಲ್ಲ ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ತನಿಖೆಯ ಬೃಹತ್ ದಾಖಲೆ ಇರುವುದು ಇಡಿ, ಸಿಬಿಐ ಮತ್ತು ವಿಚಾರಣಾ ನ್ಯಾಯಾಲಯದ ತಪ್ಪಲ್ಲ ಎಂದು ನ್ಯಾಯಾಲಯ ಹೇಳಿದೆ.

ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಪರಿಗಣಿಸಲು ಸಾಧ್ಯವಿಲ್ಲ ಎಂಬ ದೆಹಲಿಯ ಮಾಜಿ ಉಪಮುಖ್ಯಮಂತ್ರಿಯವರ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಜಾಮೀನಿಗೆ “ಅನರ್ಹರು” ಎಂದು ಹೇಳಿದೆ. ಅರ್ಜಿಯನ್ನು ಅರ್ಹತೆಯ ಮೇಲೆ ಪರಿಗಣಿಸುವ ಕೆಳ ನ್ಯಾಯಾಲಯಗಳ ಹಕ್ಕನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸಿಸೋಡಿಯಾ ಅವರು ಎಲೆಕ್ಟ್ರಾನಿಕ್ ಸಾಕ್ಷ್ಯಗಳ ನಿರ್ಣಾಯಕ ನಾಶದಲ್ಲಿ ಭಾಗಿಯಾಗಿದ್ದಾರೆ ಮತ್ತು ಅವರು ಪಕ್ಷದ ಪ್ರಬಲ ನಾಯಕರಾಗಿರುವ ಕಾರಣ ಪ್ರಭಾವಿ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಸಾಕ್ಷಿಗಳ ಮೇಲೆ ಸಿಸೋಡಿಯಾ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಸಿಸೋಡಿಯಾ ಅವರು ಸಾರ್ವಜನಿಕ ಅಭಿಪ್ರಾಯವನ್ನು ಪ್ರಾಮಾಣಿಕವಾಗಿ ಕೇಳುವ ಬದಲು, “ಯೋಜನೆಯನ್ನು ಪ್ರಿ ಡ್ರಾಫ್ಟೆಡ್ ಇಮೇಲ್‌ಗಳನ್ನು ಅವರ ನಿರ್ದೇಶನದ ಅಡಿಯಲ್ಲಿ ವಿವಿಧ ಜನರ ಸಾರ್ವಜನಿಕ ಅಭಿಪ್ರಾಯದ ಎಂದು ಕಳುಹಿಸಿದ್ದಾರೆ” ಎಂದು ಹೇಳಿದರು. “ಈ ಪ್ರಕರಣದಲ್ಲಿ ಭ್ರಷ್ಟಾಚಾರವು ನೀತಿಯನ್ನು ರೂಪಿಸುವ ಅರ್ಜಿದಾರರ ಬಯಕೆಯಿಂದ ಹುಟ್ಟಿಕೊಂಡಿದೆ. ಪ್ರತಿಕ್ರಿಯೆಯ ಒಂದು ರೂಪ ಎಂದು ಬಿಂಬಿಸುವ ಮೂಲಕ ಸುಳ್ಳು ಮಾಹಿತಿಯ ಪ್ರಸಾರವು ಭ್ರಷ್ಟಾಚಾರವನ್ನು ರೂಪಿಸುತ್ತದೆ ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಸಿಸೋಡಿಯಾ ಅವರಿಗೆ ಜಾಮೀನು ನೀಡುವಂತೆ ಪ್ರಕರಣ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ವಿಚಾರಣಾ ನ್ಯಾಯಾಲಯವು ನಿರ್ಧರಿಸಿದಂತೆ ಅದೇ ನಿಯಮಗಳು ಮತ್ತು ಷರತ್ತುಗಳ ಮೇಲೆ ಪ್ರತಿ ವಾರ ಕಸ್ಟಡಿಯಲ್ಲಿರುವ ತನ್ನ ಹೆಂಡತಿಯನ್ನು ಭೇಟಿಯಾಗಲು ಹೈಕೋರ್ಟ್ ಅವರಿಗೆ ಅನುಮತಿ ನೀಡಿತು.ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಪತ್ನಿ ಸೀಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ