AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕಾಗಿ ಮಾಡಿದ ಪ್ರಯತ್ನವಿದು: 5ಜಿ ಬಗ್ಗೆ ಪ್ರಶ್ನಿಸಿ ಕೇಸ್ ಹಾಕಿದ್ದಕ್ಕೆ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್​ ತರಾಟೆ, 20 ಲಕ್ಷ ದಂಡ

ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿದಾರರು ಪ್ರಚಾರ ಗಳಿಸಲೆಂದು ಈ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಸರಿಯಾದ ತಳಹದಿಯೇ ಇಲ್ಲ. ಅನಗತ್ಯವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿತು.

ಪ್ರಚಾರಕ್ಕಾಗಿ ಮಾಡಿದ ಪ್ರಯತ್ನವಿದು: 5ಜಿ ಬಗ್ಗೆ ಪ್ರಶ್ನಿಸಿ ಕೇಸ್ ಹಾಕಿದ್ದಕ್ಕೆ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್​ ತರಾಟೆ, 20 ಲಕ್ಷ ದಂಡ
ನಟಿ ಜೂಹಿ ಚಾವ್ಲಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 04, 2021 | 5:45 PM

Share

ದೆಹಲಿ: ದೇಶದಲ್ಲಿ 5ಜಿ ಟೆಲಿಕಾಂ ತಂತ್ರಜ್ಞಾನ ಜಾರಿಗೆ ತರುವುದನ್ನು ಪ್ರಶ್ನಿಸಿ ಹಿರಿಯ ನಟಿ ಜೂಹಿ ಚಾವ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ದೂರುದಾರರಿಗೆ ₹ 20 ಲಕ್ಷ ದಂಡ ವಿಧಿಸಿದೆ. 5ಜಿ ತರಂಗಾತರಗಳು ಮಾನವರು ಮತ್ತು ಇತರ ಜೀವಿಗಳ ಮೇಲೆ ಉಂಟು ಮಾಡುವ ಪರಿಣಾಮಗಳ ಬಗ್ಗೆ ಸರಿಯಾದ ಅಧ್ಯಯನ ನಡೆದಿಲ್ಲ. ಸಂಭಾವ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಒತ್ತಾಯಿಸಿ ಜೂಹಿ ಚಾವ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿದಾರರು ಪ್ರಚಾರ ಗಳಿಸಲೆಂದು ಈ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಸರಿಯಾದ ತಳಹದಿಯೇ ಇಲ್ಲ. ಅನಗತ್ಯವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿತು. ನಮಗೆ ಅರ್ಜಿ ಸಲ್ಲಿಸುವ ಬದಲು ಮೊದಲು ಸರ್ಕಾರದ ಗಮನ ಸೆಳೆಯಬೇಕಿತ್ತು ಎಂದು ನ್ಯಾಯಾಲಯ ಹೇಳಿತು.

ಏನಿದು ಪ್ರಕರಣ? ಭಾರತದಲ್ಲಿ 5G ಮೊಬೈಲ್ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ನಟಿ ಜೂಹಿ ಚಾವ್ಲಾ ಕಾನೂನು ವ್ಯಾಜ್ಯ ಹೂಡಿದ್ದರು. 5G ತಂತ್ರಜ್ಞಾನವು ರೇಡಿಯೋಫ್ರೀಕ್ವೆನ್ಸಿ ರೇಡಿಯೇಷನ್​ಗೆ ಜನರು ಮತ್ತು ಪ್ರಾಣಿಗಗಳನ್ನು 10ರಿಂದ 100 ಪಟ್ಟಿನ ತನಕ ಒಡ್ಡುತ್ತದೆ ಎಂದು ಹೇಳಿದ್ದಾರೆ. ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನು ಒಳಗೊಂಡ ಪೀಠವು ಈ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ನ ಮತ್ತೊಂದು ಪೀಠಕ್ಕೆ ವರ್ಗಾಯಿಸಿತ್ತು.

ಈ ಕುರಿತು ಮಾತನಾಡಿದ್ದ ಜೂಹಿ ಚಾವ್ಲಾ ಅವರ ವಕ್ತಾರರರು, 5G ತಂತ್ರಜ್ಞಾನವು ಮನುಷ್ಯರಿಗೆ ಮತ್ತು ಎಲ್ಲ ಜೀವಿಗಳಿಗೂ ಸುರಕ್ಷಿತ ಎಂಬುದನ್ನು ಪ್ರತಿವಾದಿಗಳು ಸ್ಪಷ್ಟಪಡಿಸಬೇಕು. ರೇಡಿಯೋಫ್ರೀಕ್ವೆನ್ಸಿ ರೇಡಿಯೇಷನ್ ಅಧ್ಯಯನ ವರದಿಯನ್ನು ಅದಕ್ಕೆ ಪೂರಕವಾಗಿ ನೀಡುವಂತೆ ಸೂಚಿಸಲು ಮನವಿ ಮಾಡಲಾಗಿದೆ ಎಂದಿದ್ದರು.

(Delhi High Court dismisses Juhi Chawlas plea against 5G network imposes Rs 20 lakh fine says its an Attempt to gain publicity)

ಇದನ್ನೂ ಓದಿ: 5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ

ಇದನ್ನೂ ಓದಿ: 5G technology: 4K ಗುಣಮಟ್ಟದ ಒಂದು ಇಡೀ ಸಿನಿಮಾ 25 ಸೆಕೆಂಡ್​ನಲ್ಲಿ ಡೌನ್​ಲೋಡ್ ಮಾಡಬಹುದಾದ 5G ಬಗ್ಗೆ ಗೊತ್ತೆ?

Published On - 5:44 pm, Fri, 4 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!