ಸಂವಿಧಾನ ಹತ್ಯೆ ದಿನದ ಅಧಿಸೂಚನೆ ಸಂವಿಧಾನಕ್ಕೆ ಅವಮಾನವಲ್ಲ: ದೆಹಲಿ ಹೈಕೋರ್ಟ್​

ಸಂವಿಧಾನದ ಹತ್ಯೆ ದಿನವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಅಧಿಸೂಚನೆಯನ್ನು ಯಾವುದೇ ಸಂದರ್ಭದಲ್ಲೂ ಸಂವಿಧಾನಕ್ಕೆ ಅವಮಾನ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

ಸಂವಿಧಾನ ಹತ್ಯೆ ದಿನದ ಅಧಿಸೂಚನೆ ಸಂವಿಧಾನಕ್ಕೆ ಅವಮಾನವಲ್ಲ: ದೆಹಲಿ ಹೈಕೋರ್ಟ್​
ಸಂವಿಧಾನ
Image Credit source: The Hills Times

Updated on: Jul 26, 2024 | 1:21 PM

ಜೂನ್ 25 ಅನ್ನು ಸಂವಿಧಾನದ ಹತ್ಯೆ ದಿನವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಅಧಿಸೂಚನೆಯನ್ನು ಯಾವುದೇ ಸಂದರ್ಭದಲ್ಲೂ ಸಂವಿಧಾನಕ್ಕೆ ಅವಮಾನ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

1975ರ ಜೂನ್ 25ರಂದು ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತುಪರಿಸ್ಥಿತಿಗೆ ಅವಧಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕೇಂದ್ರ ಸರ್ಕಾರ ಜೂನ್ 25ರಂದು ಸಂವಿಧಾನ ಹತ್ಯೆ ದಿನವನ್ನಾಗಿ ಆಚರಿಸಲು ಅಧಿಸೂಚನೆ ಹೊರಡಿಸಿತ್ತು.

ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಲಾಗಿದ್ದು, ಶುಕ್ರವಾರ ಅದನ್ನು ತಿರಸ್ಕರಿಸಲಾಗಿದೆ.

ಮತ್ತಷ್ಟು ಓದಿ: ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠ, ಜುಲೈ 13 ರಂದು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯು ಸಂವಿಧಾನದ 352 ನೇ ವಿಧಿ ಅಡಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ ವಿರುದ್ಧವಾಗಿಲ್ಲ ಎಂದು ಹೇಳಿದೆ.

ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಅಧಿಸೂಚನೆಯು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ ಅಥವಾ ಅಗೌರವಗೊಳಿಸುವುದಿಲ್ಲ ಎಂದು ಹೇಳಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ