AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಕೋಚಿಂಗ್ ಸೆಂಟರ್​​ನಲ್ಲಿ 3 ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣ; ನಾಲ್ವರಿಗೆ ಜಾಮೀನು

ಯಾವುದೇ ಕೋಚಿಂಗ್ ಸೆಂಟರ್ ಮಂಜೂರಾತಿ ಇಲ್ಲದೆ ನಡೆಯದಂತೆ ನೋಡಿಕೊಳ್ಳಲು ಹಾಗೂ ಕೇಂದ್ರಗಳು ನಡೆಯಬೇಕಾದ ಸ್ಥಳವನ್ನು ಗುರುತಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ವೇಳೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠವು ಸಹ ಮಾಲೀಕರಿಗೆ ₹ 5 ಕೋಟಿ ಮೊತ್ತವನ್ನು ರೆಡ್‌ಕ್ರಾಸ್‌ಗೆ ಠೇವಣಿ ಮಾಡುವಂತೆ ಸೂಚಿಸಿದೆ.

ಐಎಎಸ್ ಕೋಚಿಂಗ್ ಸೆಂಟರ್​​ನಲ್ಲಿ 3 ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣ; ನಾಲ್ವರಿಗೆ ಜಾಮೀನು
ರಾವೂಸ್ ಐಎಎಸ್ ಕೋಚಿಂಗ್ ಸೆಂಟರ್
ರಶ್ಮಿ ಕಲ್ಲಕಟ್ಟ
|

Updated on: Sep 13, 2024 | 5:46 PM

Share

ದೆಹಲಿ ಸೆಪ್ಟೆಂಬರ್ 13: ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಓಲ್ಡ್ ರಾಜಿಂದರ್ ನಗರದ ಕೋಚಿಂಗ್ ಸೆಂಟರ್ ಬೇಸ್‌ಮೆಂಟ್‌ನ ನಾಲ್ವರು ಸಹ ಮಾಲೀಕರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠವು ಸಹ ಮಾಲೀಕರಿಗೆ ₹ 5 ಕೋಟಿ ಮೊತ್ತವನ್ನು ರೆಡ್‌ಕ್ರಾಸ್‌ಗೆ ಠೇವಣಿ ಮಾಡುವಂತೆ ಸೂಚಿಸಿದೆ. ಅವರು ನೆಲಮಾಳಿಗೆಯನ್ನು ಬಿಟ್ಟುಕೊಟ್ಟು ದುರಾಸೆಯ ಕೃತ್ಯ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಯಾವುದೇ ಕೋಚಿಂಗ್ ಸೆಂಟರ್ ಮಂಜೂರಾತಿ ಇಲ್ಲದೆ ನಡೆಯದಂತೆ ನೋಡಿಕೊಳ್ಳಲು ಹಾಗೂ ಕೇಂದ್ರಗಳು ನಡೆಯಬೇಕಾದ ಸ್ಥಳವನ್ನು ಗುರುತಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಜುಲೈ 27 ರಂದು ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿ ಭಾರೀ ಮಳೆಯಿಂದಾಗಿ ರಾವೂಸ್ ಐಎಎಸ್ ಸ್ಟಡಿ ಸರ್ಕಲ್ ವಸತಿ ಕಟ್ಟಡದ ನೆಲಮಾಳಿಗೆಯಲ್ಲಿ ನೀರು ತುಂಬಿದ್ದರಿಂದ ಉತ್ತರ ಪ್ರದೇಶದ ಶ್ರೇಯಾ ಯಾದವ್ (25), ತೆಲಂಗಾಣದ ತಾನ್ಯಾ ಸೋನಿ (25) ಮತ್ತು ಕೇರಳದ ನೆವಿನ್ ಡೆಲ್ವಿನ್ (24) ಸಾವಿಗೀಡಾಗಿದ್ದರು.

ಬೇಸ್‌ಮೆಂಟ್‌ನ ಸಹ-ಮಾಲೀಕರಾದ ಪರ್ವಿಂದರ್ ಸಿಂಗ್, ತಜೀಂದರ್ ಸಿಂಗ್, ಹರ್ವಿಂದರ್ ಸಿಂಗ್ ಮತ್ತು ಸರಬ್ಜಿತ್ ಸಿಂಗ್ ಅವರು ಕೇವಲ ಬೇಸ್‌ಮೆಂಟ್‌ನ ಭೂಮಾಲೀಕರು ಮತ್ತು ಕೋಚಿಂಗ್ ಸೆಂಟರ್‌ಗೆ ಬಾಡಿಗೆ ಆಧಾರದ ಮೇಲೆ ಬಿಡಲಾಗಿದೆ ಎಂಬ ಆಧಾರದ ಮೇಲೆ ಜಾಮೀನು ಕೋರಿದರು. ಈ ಘಟನೆಯಲ್ಲಿ ಅವರು ಯಾವುದೇ ಪಾತ್ರವನ್ನು ಹೊಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆರೋಪಿಗಳ ಜಾಮೀನು ಅರ್ಜಿಯನ್ನು ಸಿಬಿಐ ವಿರೋಧಿಸಿತ್ತು. ತನಿಖೆಯು ಆರಂಭಿಕ ಹಂತದಲ್ಲಿದೆ ಮತ್ತು ಸ್ವತಂತ್ರ ಸಾಕ್ಷಿಗಳನ್ನು ಪರೀಕ್ಷಿಸುವವರೆಗೆ ನಾಲ್ವರಿಗೆ ಜಾಮೀನುನೀಡಬಾರದು ಎಂದು ವಾದಿಸಿತ್ತು.  ಘಟನೆ ನಡೆದ ಜುಲೈ 27ರಂದು ನೀರು ಹರಿಯಲು ಕಾರಣ ತಿಳಿಸುವಂತೆ ಗುರುವಾರ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.

ಇದನ್ನೂ ಓದಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ರಲ್ಲಿ ಕ್ಷಮೆಯಾಚಿಸಿದ ತಮಿಳುನಾಡಿನ ಹೋಟೆಲ್ ಮಾಲೀಕ, ಏನಿದು ಪ್ರಕರಣ?

ದೆಹಲಿಯಲ್ಲಿ ಮಳೆಯಾಗಿದೆ, ಆ ದಿನವೇಕೆ ಇಷ್ಟು ನೀರು? ಇದು ಮಳೆಯೇ ಅಥವಾ ಇನ್ನೇನಾದರೂ ಇದೆಯೇ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ನಾಲ್ವರು ಸಹ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ