AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

I.N.D.I.A ಹೆಸರಿಟ್ಟಿದ್ದನ್ನು ಪ್ರಶ್ನಿಸಿ ಬೆಂಗಳೂರು ವ್ಯಕ್ತಿಯಿಂದ ರಿಟ್ ಅರ್ಜಿ, ಪ್ರತಿಪಕ್ಷಗಳಿಗೆ ಕೋರ್ಟ್ ನೋಟಿಸ್

I.N.D.I.A ಹೆಸರಿಟ್ಟಿದ್ದನ್ನು ಪ್ರಶ್ನಿಸಿ ಬೆಂಗಳೂರಿನ ವ್ಯಕ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಪ್ರತಿಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

I.N.D.I.A ಹೆಸರಿಟ್ಟಿದ್ದನ್ನು ಪ್ರಶ್ನಿಸಿ ಬೆಂಗಳೂರು ವ್ಯಕ್ತಿಯಿಂದ ರಿಟ್ ಅರ್ಜಿ, ಪ್ರತಿಪಕ್ಷಗಳಿಗೆ ಕೋರ್ಟ್ ನೋಟಿಸ್
ದೆಹಲಿ ಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Aug 04, 2023 | 1:22 PM

ಬೆಂಗಳೂರು, (ಆಗಸ್ಟ್ 04): ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Elections 2023) ಶತಾಯಗತಾಯ ಬಿಜೆಪಿಯನ್ನು ಮಣಿಸಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ(Opposition Parties) ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದ್ದು, ಇದೀಗ I.N.D.I.A ಹೆಸರಿಟ್ಟಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್​​ಗೆ 9Delhi High Court) ರಿಟ್ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಗಿರೀಶ್ ಭಾರದ್ವಾಜ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ ದೆಹಲಿ ಹೈಕೋರ್ಟ್, ಚುನಾವಣಾ ಆಯೋಗ ಹಾಗೂ 26 ಪ್ರತಿಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ

ಪ್ರತಿಪಕ್ಷಗಳಿಂದ I.N.D.I.A ಪದದ ದುರ್ಬಳಕೆಯಾಗುತ್ತಿದೆ. ತಮ್ಮ ಸ್ವಾರ್ಥಕ್ಕೆ ಪ್ರತಿಪಕ್ಷಗಳು I.N.D.I.A ಪದ ಬಳಸುತ್ತಿವೆ. ಪ್ರಧಾನಿ ಮೋದಿ I.N.D.I.A ವಿರುದ್ದವಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ಮತದಾರರ ಮೇಲೆ ಅನುಚಿತ ಪರಿಣಾಮವಾಗಲಿದೆ. ಪ್ರತಿಪಕ್ಷಗಳ ಒಕ್ಕೂಟ ರಾಷ್ಟ್ರಧ್ವಜ ಬಳಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.

ವಕೀಲ ಅರುಣ್ ಶ್ಯಾಮ್ ವಾದ ಆಲಿಸಿದ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ, ಚುನಾವಣಾ ಆಯೋಗ ಸೇರಿದಂತೆ ಪ್ರತಿವಾದಿಗಳ ವಾದ ಆಲಿಸಬೇಕಿದೆ ಎಂದು ಅಭಿಪ್ರಾಯ ತಿಳಿಸಿ, ಪ್ರತಿಪಕ್ಷಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:18 pm, Fri, 4 August 23

ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?