ಬೆಂಗಳೂರು, (ಆಗಸ್ಟ್ 04): ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Elections 2023) ಶತಾಯಗತಾಯ ಬಿಜೆಪಿಯನ್ನು ಮಣಿಸಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ(Opposition Parties) ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದ್ದು, ಇದೀಗ I.N.D.I.A ಹೆಸರಿಟ್ಟಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ 9Delhi High Court) ರಿಟ್ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಗಿರೀಶ್ ಭಾರದ್ವಾಜ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ ದೆಹಲಿ ಹೈಕೋರ್ಟ್, ಚುನಾವಣಾ ಆಯೋಗ ಹಾಗೂ 26 ಪ್ರತಿಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ
ಪ್ರತಿಪಕ್ಷಗಳಿಂದ I.N.D.I.A ಪದದ ದುರ್ಬಳಕೆಯಾಗುತ್ತಿದೆ. ತಮ್ಮ ಸ್ವಾರ್ಥಕ್ಕೆ ಪ್ರತಿಪಕ್ಷಗಳು I.N.D.I.A ಪದ ಬಳಸುತ್ತಿವೆ. ಪ್ರಧಾನಿ ಮೋದಿ I.N.D.I.A ವಿರುದ್ದವಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ಮತದಾರರ ಮೇಲೆ ಅನುಚಿತ ಪರಿಣಾಮವಾಗಲಿದೆ. ಪ್ರತಿಪಕ್ಷಗಳ ಒಕ್ಕೂಟ ರಾಷ್ಟ್ರಧ್ವಜ ಬಳಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ವಕೀಲ ಅರುಣ್ ಶ್ಯಾಮ್ ವಾದ ಆಲಿಸಿದ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ, ಚುನಾವಣಾ ಆಯೋಗ ಸೇರಿದಂತೆ ಪ್ರತಿವಾದಿಗಳ ವಾದ ಆಲಿಸಬೇಕಿದೆ ಎಂದು ಅಭಿಪ್ರಾಯ ತಿಳಿಸಿ, ಪ್ರತಿಪಕ್ಷಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 1:18 pm, Fri, 4 August 23