AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಇಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ಹಿರಿಯ ನಾಯಕರಾದ ಸಂಜಯ್ ಸಿಂಗ್, ಮನೀಶ್ ಸಿಸೋಡಿಯಾ, ಸೌರಭ್ ಭಾರದ್ವಾಜ್ ಮತ್ತು ಇತರರ ವಿರುದ್ಧ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮತ್ತು ನ್ಯಾಯಾಲಯದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ಹೇಳಿದ್ದಾರೆ.

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ
Swarna Kanta And Arvind Kejriwal
ಸುಷ್ಮಾ ಚಕ್ರೆ
|

Updated on: May 14, 2026 | 9:20 PM

Share

ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ.

ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ ಅಬಕಾರಿ ಪ್ರಕರಣವನ್ನು ವಿಚಾರಣೆ ನಡೆಸುವುದಿಲ್ಲ ಎಂದು ಕೂಡ ಘೋಷಿಸಿದ್ದಾರೆ. ನಾನು ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ. ಆದರೆ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಕ್ರಮವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಪ್ರಾರಂಭಿಸುವುದಾಗಿ ನ್ಯಾಯಮೂರ್ತಿ ಶರ್ಮಾ ಹೇಳಿದರು.

“ನನ್ನ ವಿರುದ್ಧದ ರಾಜಕೀಯ ಅಭಿಯಾನಕ್ಕೆ ನಾನು ಹೆದರುವುದಿಲ್ಲ” ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಹೇಳಿದ್ದಾರೆ. ನ್ಯಾಯಾಧೀಶರು ಒತ್ತಡ ಅಥವಾ ರಾಜಕೀಯ ಶಕ್ತಿಯ ಮುಂದೆ ಶರಣಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿಲ್ಲದ ಹೈಡ್ರಾಮಾ; ನ್ಯಾ. ಸ್ವರಣ ಕಾಂತ ಶರ್ಮಾ – ಕೇಜ್ರಿವಾಲ್ ನಡುವೆ ಕೋರ್ಟ್​ನಲ್ಲಿ ಏನೇನಾಯ್ತು?

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಲಯದ ಮುಂದೆ ವಿಷಯವನ್ನು ತಿಳಿಸುವ ಬದಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಕಾನೂನು ವಿವಾದವನ್ನು ಸಾರ್ವಜನಿಕ ಅಭಿಯಾನವನ್ನಾಗಿ ಪರಿವರ್ತಿಸಿದ್ದಾರೆ ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಟೀಕಿಸಿದ್ದಾರೆ.

ಕೇಜ್ರಿವಾಲ್ ನೀಡಿದ ಹೇಳಿಕೆಗಳು, ಪತ್ರಗಳು ಮತ್ತು ಪ್ರಸಾರವಾದ ವಿಷಯಗಳು ಇದು ಕೇವಲ ಒಬ್ಬ ನ್ಯಾಯಾಧೀಶರ ವಿರುದ್ಧದ ಅಭಿಯಾನವಲ್ಲ, ಇಡೀ ನ್ಯಾಯಾಂಗ ವ್ಯವಸ್ಥೆಯನ್ನು ದೂಷಿಸಲು ಮಾಡಿದ ಸಂಘಟಿತ ಪ್ರಯತ್ನವಾಗಿದೆ ಎಂಬುದನ್ನು ಸಾಬೀತುಪಡಿಸುತ್ತಿವೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು