3 ವರ್ಷಗಳ ತೆರಿಗೆ ಮರು ಮೌಲ್ಯಮಾಪನದ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ತೆರಿಗೆ ಇಲಾಖೆಯ ಪರವಾಗಿ ಜೊಹೆಬ್ ಹೊಸೈನ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಮಾರ್ಚ್ 20 ರಂದು ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ದೆಹಲಿ ಮಾರ್ಚ್ 22: ಆದಾಯ ತೆರಿಗೆ ಇಲಾಖೆಯು 2014 ರಿಂದ 2017 ರವರೆಗೆ ಸತತ ಮೂರು ವರ್ಷಗಳ ಕಾಲ ಕಾಂಗ್ರೆಸ್ (Congress) ವಿರುದ್ಧ ಆರಂಭಿಸಿರುವ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ತೆರಿಗೆ ಇಲಾಖೆಯ ಪರವಾಗಿ ಜೊಹೆಬ್ ಹೊಸೈನ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಮಾರ್ಚ್ 20 ರಂದು ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ಮರು-ಮೌಲ್ಯಮಾಪನ ಪ್ರಕ್ರಿಯೆಗಳನ್ನು ಕಾಂಗ್ರೆಸ್ ವಿರೋಧಿಸಿದ್ದು, ತೆರಿಗೆ ಇಲಾಖೆಯು “ಮಿತಿಯಿಂದ ನಿರ್ಬಂಧಿಸಲ್ಪಟ್ಟಿದೆ” ಎಂದು ಹೇಳಿದೆ. ಆದರೆ ತೆರಿಗೆ ಇಲಾಖೆಯು ತೆರಿಗೆ ಪ್ರಾಧಿಕಾರದಿಂದ ಯಾವುದೇ ಶಾಸನಬದ್ಧ ನಿಬಂಧನೆಗಳ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ವಶಪಡಿಸಿಕೊಂಡ ವಸ್ತುಗಳ ಪ್ರಕಾರ, ಕಾಂಗ್ರೆಸ್‌ನ ‘ಮರೆಯಾಗಿಟ್ಟ ‘ ಆದಾಯ 520 ಕೋಟಿ ರೂ. ಈ ತಿಂಗಳ ಆರಂಭದಲ್ಲಿ, ದೆಹಲಿ ಹೈಕೋರ್ಟ್ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶವನ್ನು ಎತ್ತಿಹಿಡಿದಿದೆ. 100 ಕೋಟಿ ರೂ.ಗಿಂತ ಹೆಚ್ಚಿನ ಬಾಕಿ ವಸೂಲಿಗಾಗಿ ತೆರಿಗೆ ಇಲಾಖೆಯ ನೋಟಿಸ್‌ಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್‌ನ ಅರ್ಜಿಯನ್ನು ತಿರಸ್ಕರಿಸಿತು.
ಈ ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಯಾವುದೇ ಆಧಾರವಿಲ್ಲ ಎಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಮತ್ತು ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿದೆ.
ರಾಜಕೀಯ ಸೇಡು ಎಂದ ಕಾಂಗ್ರೆಸ್
ಗುರುವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಆಡಳಿತಾರೂಢ ಬಿಜಿಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.”ಭಾರತದ ಶೇಕಡಾ 20 ರಷ್ಟು ಜನರು ನಮಗೆ ಮತ ಹಾಕುತ್ತಾರೆ. ನಾವು ಯಾವುದಕ್ಕೂ ಎರಡು ರೂಪಾಯಿ ಪಾವತಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ನಮ್ಮನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: ಒಡಿಶಾದಲ್ಲಿ ಬಿಜೆಡಿ ಜೊತೆ ಮೈತ್ರಿ ಇಲ್ಲ, ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ನಿರ್ಧಾರ
“ನಾವು ಯಾವುದೇ ಪ್ರಚಾರ ಕಾರ್ಯವನ್ನು ಮಾಡಲು ಸಾಧ್ಯವಿಲ್ಲ. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ವಿಮಾನಯಾನ ಮಾಡಲು ಸಾಧ್ಯವಿಲ್ಲ. ವಿಮಾನ ಹಾರಾಟ ಮರೆತುಬಿಡಿ, ಅವರು ರೈಲು ಟಿಕೆಟ್ ಖರೀದಿಸಲು ಸಹ ಸಾಧ್ಯವಿಲ್ಲ,” ಎಂದು ಗಾಂಧಿ ಅವರು ತೆರಿಗೆ ಪ್ರಕರಣದ ಬಗ್ಗೆ ಹೇಳಿದ್ದಾರೆ.
ಆದರೆ, ರಾಜಕೀಯ ಸೇಡಿನ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ತೆರಿಗೆ ವಂಚನೆಯಲ್ಲಿ ಕಾಂಗ್ರೆಸ್ ತಪ್ಪಿತಸ್ಥರಾಗಿದ್ದು, ಆ ಕಾರಣದಿಂದಾಗಿ ಕ್ರಮವನ್ನು ಎದುರಿಸಬೇಕಾಯಿತು ಎಂದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ