ಕೋಮುವಾದಿ ಭಾಷಣದ ಆರೋಪ; ಮೋದಿ ವಿರುದ್ಧ ಸಲ್ಲಿಸಿದ ಮನವಿ ತಿರಸ್ಕರಿಸಿದ ಹೈಕೋರ್ಟ್

Lok Sabha Elections 2024: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೋಮುವಾದಿ ಭಾಷಣ ಮಾಡಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.

ಕೋಮುವಾದಿ ಭಾಷಣದ ಆರೋಪ; ಮೋದಿ ವಿರುದ್ಧ ಸಲ್ಲಿಸಿದ ಮನವಿ ತಿರಸ್ಕರಿಸಿದ ಹೈಕೋರ್ಟ್
ಮೋದಿ
Follow us
ಸುಷ್ಮಾ ಚಕ್ರೆ
|

Updated on: May 13, 2024 | 3:58 PM

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Elections) ನಡುವೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕೋಮು ಸೌಹಾರ್ದತೆ ಕದಡಿದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ತಿರಸ್ಕರಿಸಿದೆ. ಧರ್ಮ ಮತ್ತು ದೇವತೆಗಳ ಹೆಸರಿನಲ್ಲಿ ಮತ ಯಾಚಿಸಿರುವ ಪ್ರಧಾನಮಂತ್ರಿಯವರು ನೀಡಿದ ಭಾಷಣಕ್ಕೆ ಸಂಬಂಧಿಸಿದಂತೆ ಮಾಡಿದ ಮನವಿಯಲ್ಲಿ ನ್ಯಾಯಾಲಯವು ತನ್ನ ಈ ಆದೇಶವನ್ನು ಉಲ್ಲೇಖಿಸಿದೆ. ಅಂತಹ ವಿಷಯಗಳಲ್ಲಿ ಯಾವುದೇ ಪೂರ್ವಾಗ್ರಹವನ್ನು ಮಾಡುವುದು ನ್ಯಾಯಸಮ್ಮತವಲ್ಲ ಎಂದು ಹೈಕೋರ್ಟ್ ಹೇಳಿದೆ.

ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಮನವಿಗೆ ಅರ್ಹತೆಯ ಕೊರತೆಯಿದೆ. ಅವರ ಭಾಷಣವನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ಟೀಕಿಸಿದ್ದಾರೆ. ಅರ್ಜಿದಾರರ ದೂರನ್ನು ಕಾನೂನಿನ ಪ್ರಕಾರ ಸ್ವತಂತ್ರವಾಗಿ ಮೌಲ್ಯಮಾಪನ ಮಾಡುವ ಅಧಿಕಾರವನ್ನು ಭಾರತದ ಚುನಾವಣಾ ಆಯೋಗ ಹೊಂದಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಈ ನ್ಯಾಯಾಲಯವು ಅರ್ಜಿಯಲ್ಲಿ ಯಾವುದೇ ಅರ್ಹತೆಯನ್ನು ಕಂಡುಕೊಳ್ಳುವುದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಅಂದ್ರೆ ನಾವು ತೊಡಿಸ್ತೇವೆ: ಬಿಹಾರದಲ್ಲಿ ಪ್ರಧಾನಿ ಮೋದಿ

ಏನಿದು ಪ್ರಕರಣ?:

ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ಸದಸ್ಯರ ವಿರುದ್ಧ ದ್ವೇಷದ ಭಾಷಣಗಳಿಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಶಾಹೀನ್ ಅಬ್ದುಲ್ಲಾ, ಅಮಿತಾಭ್ ಪಾಂಡೆ ಮತ್ತು ದೇಬ್ ಮುಖರ್ಜಿ ಎಂಬ ಮೂವರು ವ್ಯಕ್ತಿಗಳು ಸಲ್ಲಿಸಿದ ಮನವಿಯಲ್ಲಿ ದ್ವೇಷದ ಭಾಷಣಗಳನ್ನು ನೀಡುವ ರಾಜಕೀಯ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ತಕ್ಷಣದ ಕ್ರಮ ಕೈಗೊಳ್ಳಲು ಇಸಿಐಗೆ ನಿರ್ದೇಶನವನ್ನು ಕೋರಲಾಗಿತ್ತು.

“ಕೋಮು ವಿಭಜಕ ಭಾಷಣಗಳನ್ನು ನೀಡುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ, 153-ಬಿ, 295 ಮತ್ತು 505 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ. ಚುನಾವಣೆಯ ಸಮಯದಲ್ಲಿ ಮಾಡಿದ ಭಾಷಣಗಳು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ ಅಡಿಯಲ್ಲಿ ಅಪರಾಧ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ನಾಮಪತ್ರ ಸಲ್ಲಿಕೆಗೂ ಮುನ್ನ ಇಂದು ವಾರಾಣಸಿಯಲ್ಲಿ ಪ್ರಧಾನಿ ಮೋದಿ ರೋಡ್​ ಶೋ

ಮಾದರಿ ನೀತಿ ಸಂಹಿತೆಯ (ಎಂಸಿಸಿ) ಆಪಾದಿತ ಉಲ್ಲಂಘನೆಯ ಕುರಿತು ಭಾರತದ ಚುನಾವಣಾ ಆಯೋಗ (ಇಸಿಐ) ವ್ಯವಹರಿಸಬೇಕಾದ ವಿಧಾನವನ್ನು ನ್ಯಾಯಾಲಯಗಳು ಸೂಕ್ಷ್ಮವಾಗಿ ನಿರ್ವಹಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಭಾಷಣಗಳು ಯಾವುವು?:

ವರದಿಯ ಪ್ರಕಾರ, ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕಾಂಗ್ರೆಸ್ ಜನರಿಂದ ಸಂಪತ್ತನ್ನು ಕಸಿದುಕೊಂಡು ಅದನ್ನು “ಒಳನುಸುಳುಕೋರರಿಗೆ” ಮತ್ತು “ಹೆಚ್ಚು ಮಕ್ಕಳಿರುವವರಿಗೆ” ಮರುಹಂಚಿಕೆ ಮಾಡುತ್ತದೆ ಎಂದು ಆರೋಪಿಸಿ ಮೋದಿಯವರ ಮಾತುಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

ಏಪ್ರಿಲ್ 24ರಂದು ಮಧ್ಯಪ್ರದೇಶದ ಸಾಗರ್​ನಲ್ಲಿ ನಡೆದ ಮತ್ತೊಂದು ಭಾಷಣವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲಿ ಕಾಂಗ್ರೆಸ್ ಧರ್ಮ ಆಧಾರಿತ ಮೀಸಲಾತಿಯನ್ನು ನೀಡಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ ಎಂದು ವರದಿ ಸೇರಿಸಲಾಗಿದೆ. ಆದರೆ, ತಮ್ಮ ಹೇಳಿಕೆಯನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್