ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದ ದೆಹಲಿ ಹೈಕೋರ್ಟ್​

|

Updated on: Apr 04, 2024 | 12:46 PM

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್​ ತಿರಸ್ಕರಿಸಿದೆ.

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದ ದೆಹಲಿ ಹೈಕೋರ್ಟ್​
ಅರವಿಂದ್ ಕೇಜ್ರಿವಾಲ್
Follow us on

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್​ ತಿರಸ್ಕರಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.

ಕಳೆದ ವಾರ, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಒಂದು ಮನವಿ ಸಲ್ಲಿಸಲಾಯಿತು.

ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರಪತಿ ಆಳ್ವಿಕೆ ಅಥವಾ ರಾಜ್ಯಪಾಲರ ಆಳ್ವಿಕೆಯನ್ನು ನ್ಯಾಯಾಲಯವು ಹೇರಿರುವ ಯಾವುದೇ ಪೂರ್ವನಿದರ್ಶನವಿದೆಯೇ? ಎಂದು ಪೀಠ ಹೇಳಿದೆ.

ಮತ್ತಷ್ಟು ಓದಿ: ಇಡಿ ಬಂಧನ ವಿರೋಧಿಸಿ ಕೇಜ್ರಿವಾಲ್ ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ವಿಷ್ಣು ಗುಪ್ತಾ ಈ ಅರ್ಜಿ ಸಲ್ಲಿಸಿದ್ದಾರೆ. ಗುಪ್ತಾ ಬಳಿಕ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡರು ಮತ್ತು ಲೆಫ್ಟಿನೆಂಟ್ ಗವರ್ನರ್ ಮುಂದೆ ಪ್ರಸ್ತುತಿ ಮಾಡುವುದಾಗಿ ಹೇಳಿದರು.

ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಬಹುದು? ಎಲ್‌ಜಿ ಅದನ್ನು ನಿರ್ಧರಿಸಲು ಸಂಪೂರ್ಣ ಸಮರ್ಥರಾಗಿದ್ದಾರೆ. ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಅವರು ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:45 pm, Thu, 4 April 24