Arvind Kejriwal: ಕೇಜ್ರಿವಾಲ್ನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂಬ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಈ ವಿಷಯದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳಿದೆ.ವಿಚಾರಣೆ ಸಂದರ್ಭದಲ್ಲಿ ಪೀಠವು ಪ್ರಾಯೋಗಿಕ ತೊಂದರೆಗಳು ಇರಬಹುದು ಆದರೆ ಅದು ಬೇರೆಯೇ ಆಗಿದೆ. ಕಾನೂನು ತಡೆ ಎಲ್ಲಿದೆ?" ಎಂದು ಪ್ರಶ್ನಿಸಿತು.
ದೆಹಲಿ ಮಾರ್ಚ್ 28: ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದೆಹಲಿ ಹೈಕೋರ್ಟ್ (Delhi High Court) ಇಂದು (ಗುರುವಾರ) ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಈ ವಿಷಯದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳಿದೆ.
ವಿಚಾರಣೆಯ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಯದಿರಲು ಇರುವ ಕಾನೂನು ಅಡ್ಡಿಯನ್ನು ತೋರಿಸಲು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಅವರ ವಕೀಲರನ್ನು ನ್ಯಾಯಾಲಯ ಕೇಳಿದೆ.
ಪ್ರಾಯೋಗಿಕ ತೊಂದರೆಗಳು ಇರಬಹುದು ಆದರೆ ಅದು ಬೇರೆಯೇ ಆಗಿದೆ. ಕಾನೂನು ತಡೆ ಎಲ್ಲಿದೆ?” ಎಂದು ನ್ಯಾಯಾಲಯ ಪ್ರಶ್ನಿಸಿತು. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕನನ್ನು ಮಾರ್ಚ್ 21 ರಂದು ಬಂಧಿಸಲಾಯಿತು ಮತ್ತು ನಂತರ ದೆಹಲಿ ನ್ಯಾಯಾಲಯದಿಂದ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಲಾಯಿತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪಿತೂರಿಯಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪವನ್ನು ಕೇಜ್ರಿವಾಲ್ ಎದುರಿಸುತ್ತಿದ್ದಾರೆ.
ಪ್ರತ್ಯೇಕ ಬೆಳವಣಿಗೆಯಲ್ಲಿ, ದೆಹಲಿ ಹೈಕೋರ್ಟ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಗಳನ್ನು ನಡೆಸದಂತೆ ವಕೀಲರಿಗೆ ಎಚ್ಚರಿಕೆ ನೀಡಿದ್ದು, ತೀವ್ರ ಪರಿಣಾಮಗಳನ್ನು ಎದುರಸಬೇಕಾಗುತ್ತದೆ ಎಂದಿದೆ.
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ಕಾನೂನು ಘಟಕವು ರಾಜಧಾನಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು.
ಇದನ್ನೂ ಓದಿ: Arvind Kejriwal: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತೆ 4 ದಿನ ಇಡಿ ಕಸ್ಟಡಿಗೆ
“ನ್ಯಾಯಾಲಯದಲ್ಲಿ ಪ್ರತಿಭಟನೆಯನ್ನು ಸಂಘಟಿಸಿದರೆ ಪರಿಣಾಮಗಳು ತೀವ್ರವಾಗಿರುತ್ತವೆ. ನ್ಯಾಯಾಲಯಗಳನ್ನು ತಡೆಹಿಡಿಯಲಾಗುವುದಿಲ್ಲ. ನ್ಯಾಯಾಲಯಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ನ್ಯಾಯಾಲಯವನ್ನು ಸಂಪರ್ಕಿಸುವ ಯಾರೊಬ್ಬರ ಹಕ್ಕನ್ನು ನಾವು ಕಸಿದುಕೊಳ್ಳಲು ಸಾಧ್ಯವಿಲ್ಲ, ”ಯಾರಾದರೂ ಅದನ್ನು ಮಾಡಿದರೆ, ಅವರು ತಮ್ಮ ಮೈಮೇಲೆ ಗಂಡಾಂತರ ಎಳೆದುಕೊಳ್ಳುತ್ತಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:58 pm, Thu, 28 March 24