AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ಎಫೆಕ್ಟ್​​: ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ; ಕೇಂದ್ರಕ್ಕೆ ಚಾಟಿ

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ಏರ್​ಲೈನ್ಸ್​ಗಳು ಪ್ರಯಾಣಿಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡಿವೆ. 40 ಸಾವಿರದವರೆಗೆ ವಿಮಾನ ದರ ಏರಿಕೆ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಇಂಡಿಗೋ ಎಫೆಕ್ಟ್​​: ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ; ಕೇಂದ್ರಕ್ಕೆ ಚಾಟಿ
ದೆಹಲಿ ಹೈಕೋರ್ಟ್​​ ಕಿಡಿ
ಮಹೇಶ್ ಇ, ಭೂಮನಹಳ್ಳಿ
| Updated By: ಪ್ರಸನ್ನ ಹೆಗಡೆ|

Updated on:Dec 10, 2025 | 2:01 PM

Share

ದೆಹಲಿ, ಡಿಸೆಂಬರ್​​ 10: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಸರ್ಕಾರವನ್ನ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಮಾನ ಪ್ರಯಾಣ ದರ 40 ಸಾವಿರ ಆಗಲು ಹೇಗೆ ಸಾಧ್ಯ? ಅದನ್ನ ತಡೆಯಲು ಯಾಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿರುವ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಅವರದಿದ್ದ ಪೀಠ, ಪರಿಸ್ಥಿತಿಯನ್ನ ಆತಂಕಕಾರಿ ಎಂದಿದೆ.

ಬಿಕ್ಕಟ್ಟು ಸಂದರ್ಭದಲ್ಲಿ ಇತರ ವಿಮಾನಯಾನ ಸಂಸ್ಥೆಗಳಿಗೆ ಲಾಭ ಪಡೆಯಲು ಹೇಗೆ ಅನುಮತಿಸಬಹುದು? ಅದು 35-40 ಸಾವಿರ ಹಣ ಕೊಟ್ಟು ಹೇಗೆ ಹೋಗಲು ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ. ಇಂತಹ ಪರಿಸ್ಥಿತಿಯು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದುಕೇಂದ್ರದ ನಡೆ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಇಂಡಿಗೋ ಹಾರಾಟ ವ್ಯತ್ಯಯ; ಕೆಂಪೇಗೌಡ ಏರ್​ಪೋರ್ಟ್ ಆವರಣದ ಅಂಗಡಿ–ಮುಂಗಟ್ಟುಗಳಿಗೆ ಕೋಟ್ಯಂತರ ರೂ. ನಷ್ಟ

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿರುವ ನಡುವೆ ಉಳಿದ ಏರ್​​ಲೈನ್​ಸ್ಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದವು. ಟಿಕೆಟ್​​ ದರವನ್ನು ಮನಬಂದಂತೆ ಏರಿಸಿದ್ದ ಪರಿಣಾಮ ದುಪ್ಪಟ್ಟು ಹಣ ಕೊಟ್ಟು ಪ್ರಯಾಣಿಸಬೇಕಾದ ಸ್ಥಿತಿ ಉದ್ಭವಿಸಿತ್ತು. ಬಸ್​​ಗಳ ದರವೂ ಗಗನಮುಖಿಯಾದ ಕಾರಣ ಪ್ರಯಾಣಿಕರು ಈ ಬಗ್ಗೆ ಕಿಡಿ ಕಾರಿದ್ದರು. ಇದೇ ವಿಚಾರವಾಗಿ ಈಗ ದೆಹಲಿ ಹೈಕೋರ್ಟ್​​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಿಂದ ಹಾರಾಟ ನಡೆಸುವ ಇಂಡಿಗೋ ಏರ್​ಲೈನ್ಸ್​ ವಿಮಾನಗಳ ಸಂಚಾರದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್​ ಆಗಿವೆ. ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 26 ವಿಮಾನಗಳು ಮತ್ತು ಆಗಮಿಸಬೇಕಿದ್ದ 32 ಇಂಡಿಗೋ ಫ್ಲೈಟ್ಸ್​ ರದ್ದಾಗಿವೆ. ನಿನ್ನೆ ಒಟ್ಟು 121 ಇಂಡಿಗೋ ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:00 pm, Wed, 10 December 25

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್