ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ: ಸುಪ್ರೀಂ ಕೋರ್ಟ್​ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ  ದೆಹಲಿ ಮುಖ್ಯಮಂತ್ರಿ & ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗೆ ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್​ಗೆ ಜಾಮೀನು ನೀಡಿತ್ತು. ಆದರೆ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.

ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ: ಸುಪ್ರೀಂ ಕೋರ್ಟ್​ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ: ಸುಪ್ರೀಂ ಕೋರ್ಟ್​ ಮೊರೆ ಹೋದ ಅರವಿಂದ ಕೇಜ್ರಿವಾಲ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 23, 2024 | 7:20 PM

ದೆಹಲಿ, ಜೂನ್​ 23: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ  ದೆಹಲಿ ಮುಖ್ಯಮಂತ್ರಿ & ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಜಾಮೀನು ಕೋರಿ ಸುಪ್ರೀಂಕೋರ್ಟ್ (Supreme Court)​ ಮೊರೆ ಹೋಗಿದ್ದಾರೆ. ತಮ್ಮ ವಕೀಲರ ಮೂಲಕ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಇತ್ತೀಚೆಗೆ ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್​ಗೆ ಜಾಮೀನು ನೀಡಿತ್ತು. ಆದರೆ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಹೀಗಾಗಿ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಕೇಜ್ರಿವಾಲ್ ಪರ ವಕೀಲರು ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ಗೆ ಜಾಮೀನು ನೀಡಲಾಗಿತ್ತು. ಆದರೆ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನ್ನ ಆದೇಶ ನೀಡುವವರೆಗೆ ಜಾಮೀನಿಗೆ ತಡೆ ನೀಡಿತ್ತು.

ಇದನ್ನೂ ಓದಿ: ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದ ದೆಹಲಿ ಹೈಕೋರ್ಟ್, ಇನ್ನೆರಡು ದಿನ ಜೈಲಲ್ಲೇ ಕೇಜ್ರಿವಾಲ್

ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಇಡಿ ಪರ ವಾದ ಮಂಡಿಸಿದ ಜನರಲ್ ಎಸ್‌ವಿ ರಾಜು, ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ‘ಲೋಪ್‌ಸೈಡ್’ ಮತ್ತು ‘ಏಕಪಕ್ಷೀಯ’ ಎಂದು ಬಣ್ಣಿಸಿದ್ದಾರೆ. ‘ದಾಖಲೆಗಳನ್ನು ಪರಿಗಣಿಸದೆಯೇ ನಿರ್ಧಾರ ಕೈಗೊಳ್ಳಲಾಗಿದೆ, ದಾಖಲೆಗಳನ್ನು ಪರಿಗಣಿಸದೆ ಅವು ಸಂಬಂಧಿತ ಅಥವಾ ಅಪ್ರಸ್ತುತ ಎಂದು ಹೇಗೆ ತೀರ್ಮಾನಿಸುತ್ತೀರಿ’ ಎಂದು ವಾದಿಸಿದ್ದರು.

ಇದನ್ನೂ ಓದಿ: ಕೇಜ್ರಿವಾಲ್ ಜೈಲಿಗೆ ಹೋದ ನಂತರ ಉತ್ತರಾಧಿಕಾರಿಯನ್ನು ಘೋಷಿಸಬೇಕು: ಅಮಿತ್ ಶಾ

ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ನ್ಯಾಯ್ ಬಿಂದು ಅವರು ಗುರುವಾರ ಕೇಜ್ರಿವಾಲ್‌ಗೆ 1 ಲಕ್ಷ ರೂ. ಜಾಮೀನು ಬಾಂಡ್ ಅನ್ನು ಒದಗಿಸಿ ಜಾಮೀನು ನೀಡಿದ್ದರು. ಜಾಮೀನು ಬಾಂಡ್ ಸಲ್ಲಿಸುವ ಪ್ರಕ್ರಿಯೆಯನ್ನು 48 ಗಂಟೆಗಳ ಕಾಲ ಮುಂದೂಡುವಂತೆ ಇಡಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Sun, 23 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ