Arvind Kejriwal: ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ಸಿಬಿಐನಿಂದ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಲಿದೆ.  ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಬಿಐ ಬಂಧಿಸಿತ್ತು.

Arvind Kejriwal: ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ
ಅರವಿಂದ್ ಕೇಜ್ರಿವಾಲ್
Follow us
|

Updated on: Jul 01, 2024 | 8:54 PM

ದೆಹಲಿ ಜುಲೈ 01: ಸಿಬಿಐನಿಂದ ಬಂಧನದ ವಿರುದ್ಧ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು (ಸೋಮವಾರ) ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ನಾಳೆ (ಮಂಗಳವಾರ) ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ದೆಹಲಿ ಮುಖ್ಯಮಂತ್ರಿಯ ಅರ್ಜಿಯ ವಿಚಾರಣೆ ನಡೆಸಲಿದೆ.  ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಬಿಐ ಬಂಧಿಸಿತ್ತು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಕೆಲವು ದಿನಗಳ ನಂತರ ಸಿಬಿಐ ಈ ಕ್ರಮ ಕೈಗೊಂಡಿದೆ. ಅದೇ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರು ಮೂರು ದಿನಗಳ ಕಾಲ ಕೇಂದ್ರೀಯ ತನಿಖಾ ಬ್ಯೂರೋ (ಸಿಬಿಐ) ಕಸ್ಟಡಿಗೆ ನೀಡಲು ಆದೇಶಿಸಿದ್ದ ಜೂನ್ 26 ರ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದಾರೆ.

ಜೂನ್ 29 ರಂದು, ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವ ವಿಚಾರಣಾ ನ್ಯಾಯಾಲಯವು, ಅವರ ಹೆಸರು ಪ್ರಮುಖ ಪಿತೂರಿದಾರರಲ್ಲಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ, ಅವರ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಾಗಬಹುದು ಎಂದು ಹೇಳಿದೆ.

ಅರವಿಂದ್ ಕೇಜ್ರಿವಾಲ್ ಅವರು ತನಿಖಾ ತಂಡದೊಂದಿಗೆ ಸಹಕರಿಸುತ್ತಿಲ್ಲ. ಮೂರು ದಿನಗಳ ಕಸ್ಟಡಿಯಲ್ಲಿ ನುಣುಚಿಕೊಳ್ಳುವ ಉತ್ತರವನ್ನು ನೀಡಿದ್ದಾರೆ ಎಂದು ಸಿಬಿಐ ಹೇಳಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಅದು ಹೇಳಿದೆ. ಜೂನ್ 26 ರಂದು, ವಿಚಾರಣಾ ನ್ಯಾಯಾಲಯವು ಸಿಬಿಐನಿಂದ ಅವರ ಬಂಧನವನ್ನು ಅಕ್ರಮ ಎಂದು ಘೋಷಿಸಲು ನಿರಾಕರಿಸಿತು. ವಿಚಾರಣೆಯ ನ್ಯಾಯಾಧೀಶರು ಬಂಧನದ ಸಮಯವು “ಸನ್ನಿಹಿತವಾಗಿರಬಹುದು ಆದರೆ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಲು ಇದು ಸ್ಪಷ್ಟ ಮಾನದಂಡವಲ್ಲ” ಎಂದು ಹೇಳಿದರು.

ಇದನ್ನೂ ಓದಿ: Arvind Kejriwal: ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ರಾಜಕಾರಣಿಗಳು ಮತ್ತು ಉದ್ಯಮಿಗಳ ಗುಂಪಿಗೆ ಅನುಕೂಲಕರವಾದ ಮದ್ಯ ನೀತಿಯನ್ನು ರೂಪಿಸಿದ್ದಕ್ಕಾಗಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರು ₹ 100 ಕೋಟಿ ಕಿಕ್‌ಬ್ಯಾಕ್‌ಗೆ ಸ್ವೀಕರಿಸಿದ್ದಾರೆ ಎಂದು ಏಜೆನ್ಸಿಗಳು ಆರೋಪಿಸಿವೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಪರವಾನಗಿ ನೀಡುವಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಿದ ಕೆಲವೇ ದಿನಗಳಲ್ಲಿ ನೀತಿಯನ್ನು ರದ್ದುಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು