ತುರ್ತು ವಿಚಾರಣೆ ಇಲ್ಲ, ಮುಂದಿನ ವಾರ ಅರವಿಂದ್ ಕೇಜ್ರಿವಾಲ್ ಅರ್ಜಿ ಆಲಿಸಲಿದೆ ದೆಹಲಿ ಹೈಕೋರ್ಟ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನ ಮದ್ಯ ನೀತಿ ಪ್ರಕರಣದಲ್ಲಿ ಗುರುವಾರ ಬಂಧಿಸಲಾಯಿತು.ಮರುದಿನ ಅಂದರೆ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಅವರ ಬಂಧನದ ವಿರುದ್ಧ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು ಭಾನುವಾರದೊಳಗೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆಯೂ ಕೋರಿದ್ದರು

ತುರ್ತು ವಿಚಾರಣೆ ಇಲ್ಲ, ಮುಂದಿನ ವಾರ ಅರವಿಂದ್ ಕೇಜ್ರಿವಾಲ್ ಅರ್ಜಿ ಆಲಿಸಲಿದೆ ದೆಹಲಿ ಹೈಕೋರ್ಟ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:Mar 23, 2024 | 8:58 PM

ದೆಹಲಿ ಮಾರ್ಚ್ 23: ತಮ್ಮ ಬಂಧನ ಹಾಗೂ ಜಾರಿ ನಿರ್ದೇಶನಾಲಯಕ್ಕೆ (ED) ಏಳು ದಿನಗಳ ಕಾಲ ಕಸ್ಟಡಿಗೆ ನೀಡಿರುವ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನವಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು ಮದ್ಯ ನೀತಿ ಪ್ರಕರಣದಲ್ಲಿ ಗುರುವಾರ ಬಂಧಿಸಲಾಯಿತು.ಮರುದಿನ ಅಂದರೆ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಅವರ ಬಂಧನದ ವಿರುದ್ಧ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು ಭಾನುವಾರದೊಳಗೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆಯೂ ಕೋರಿದ್ದರು.

ಆದಾಗ್ಯೂ, ಹೋಳಿಗಾಗಿ ಎರಡು ರಜಾದಿನಗಳ ನಂತರದ ಮೊದಲ ಕೆಲಸದ ದಿನವಾದ ಬುಧವಾರ ಪುನಃ ವಿಚಾರಣೆ ನಡೆಸಲಾಗುವುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಶನಿವಾರ ಸಲ್ಲಿಸಿದ ಅರ್ಜಿಯಲ್ಲಿ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ರಿಮಾಂಡ್ ಆದೇಶವನ್ನು ಕಾನೂನುಬಾಹಿರ ಎಂದು ಹೇಳಿದ್ದಾರೆ. ಎಎಪಿ ಮುಖ್ಯಸ್ಥರಿಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದ್ದು, ಕೆಲವು ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ತೆಗೆದುಕೊಂಡಿತು. “ನಾವು ಎರಡೂ ಕಡೆಯವರನ್ನು ಕೇಳಿದ್ದೇವೆ. ನಾವು ಈ ಹಂತದಲ್ಲಿ ರಕ್ಷಣೆ ನೀಡಲು ಒಲವು ತೋರುತ್ತಿಲ್ಲ. ಪ್ರತಿವಾದಿಯು (ಇಡಿ) ಉತ್ತರವನ್ನು ಸಲ್ಲಿಸಲು ಸ್ವತಂತ್ರವಾಗಿದೆ” ಎಂದು ಇಬ್ಬರು ನ್ಯಾಯಾಧೀಶರ ಪೀಠ ಹೇಳಿತ್ತು.

ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿರುವ ಎಎಪಿ ರಾಷ್ಟ್ರೀಯ ಸಂಚಾಲಕರು ತಮ್ಮ ಬಂಧನ ಮತ್ತು ರಿಮಾಂಡ್ ಆದೇಶವನ್ನು ಪ್ರಶ್ನಿಸಿ, ಇದು  ಕಾನೂನುಬಾಹಿರ ಎಂದು ಕರೆದರು. ಕೇಜ್ರಿವಾಲ್ ಅವರು ಕಸ್ಟಡಿಯಿಂದ ತಕ್ಷಣ ಬಿಡುಗಡೆಗೆ ಅರ್ಹರಾಗಿದ್ದಾರೆ, ಭಾನುವಾರದೊಳಗೆ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶರಿಂದ ತುರ್ತು ವಿಚಾರಣೆಯನ್ನು ಕೋರಿ ಅರ್ಜಿ ಸಲ್ಲಿಸಲಾಗಿತ್ತು

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಶುಕ್ರವಾರ ಮಾರ್ಚ್ 28 ರವರೆಗೆ 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಗುರುವಾರ ರಾತ್ರಿ ಅವರ ನಿವಾಸದಿಂದ ಇಡಿ ಅವರನ್ನು ಬಂಧಿಸಿದೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ ‘ಅನಗತ್ಯ ಹಸ್ತಕ್ಷೇಪ’: ಕೇಂದ್ರ ಸರ್ಕಾರ

ಬಿಜೆಪಿ ಸರ್ಕಾರ ಇಡೀ ಪ್ರತಿಪಕ್ಷವನ್ನು ಜೈಲಿಗೆ ಹಾಕುವಲ್ಲಿ ನಿರತವಾಗಿದೆ:ಸೌರಭ್ ಭಾರದ್ವಾಜ್

ಎಎಪಿ ನಾಯಕ ಸೌರಭ್ ಭಾರದ್ವಾಜ್ ಅವರು ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, “ಬಿಜೆಪಿ ಸರ್ಕಾರ ಇಡೀ ಪ್ರತಿಪಕ್ಷವನ್ನು ಜೈಲಿಗೆ ಹಾಕುವಲ್ಲಿ ನಿರತವಾಗಿದೆ ಎಂದು ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನರಿಗೆ ತಿಳಿದಿದೆ” ಎಂದು ಹೇಳಿದ್ದಾರೆ. ಸೌರಭ್ ಭಾರದ್ವಾಜ್ ಭಾರತದ ಪರಿಸ್ಥಿತಿಯನ್ನು ರಷ್ಯಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾದಂತಹ ದೇಶಗಳಿಗೆ ಹೋಲಿಸಿದ್ದಾರೆ. ಸೌರಭ್ ಭಾರದ್ವಾಜ್ ಪ್ರಮುಖ ವಿರೋಧ ಪಕ್ಷದ ನಾಯಕರ ಬಂಧನ ಮತ್ತು ಬೆದರಿಕೆ ತಂತ್ರಗಳನ್ನು ಎತ್ತಿ ತೋರಿಸುತ್ತಾ, “ನಮ್ಮ ಪ್ರಮುಖ 4 ನಾಯಕರು ಸುಳ್ಳು ಪ್ರಕರಣಗಳ ಅಡಿಯಲ್ಲಿ ಜೈಲಿನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 23 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ