AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಸಾವಿನ ಬಳಿಕ ಖಿನ್ನತೆಗೆ ಒಳಗಾದ ಮಹಿಳೆ, ಗರ್ಭಪಾತಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್​

ಪತಿಯ ಸಾವಿನ ಬಳಿಕ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ಅಂತಾ ಸಮಯದಲ್ಲಿ ಆಕೆಯ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ವಿಧವೆಯೊಬ್ಬರು ತನ್ನ 27 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಹೈಕೋರ್ಟ್​ ಮೊರೆ ಹೋಗಿದ್ದರು, ಅಷ್ಟೇ ಅಲ್ಲದೆ ತನ್ನ ಮಾನಸಿಕ ಸ್ಥಿತಿ ಬಗ್ಗೆಯೂ ಮಾಹಿತಿ ನೀಡಿದ್ದರು. ಗಂಡನ ಸಾವಿನಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಕೋರ್ಟ್​ಗೆ ಹೇಳಲಾಗಿತ್ತು.

ಪತಿ ಸಾವಿನ ಬಳಿಕ ಖಿನ್ನತೆಗೆ ಒಳಗಾದ ಮಹಿಳೆ, ಗರ್ಭಪಾತಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್​
ನಯನಾ ರಾಜೀವ್
|

Updated on: Jan 05, 2024 | 8:45 AM

Share

ಪತಿಯ ಸಾವಿನ ಬಳಿಕ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ಅಂತಾ ಸಮಯದಲ್ಲಿ ಆಕೆಯ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ವಿಧವೆಯೊಬ್ಬರು ತನ್ನ 27 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಹೈಕೋರ್ಟ್​ ಮೊರೆ ಹೋಗಿದ್ದರು, ಅಷ್ಟೇ ಅಲ್ಲದೆ ತನ್ನ ಮಾನಸಿಕ ಸ್ಥಿತಿ ಬಗ್ಗೆಯೂ ಮಾಹಿತಿ ನೀಡಿದ್ದರು. ಗಂಡನ ಸಾವಿನಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಕೋರ್ಟ್​ಗೆ ಹೇಳಲಾಗಿತ್ತು.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಅವರು ಅರ್ಜಿದಾರರ ಮನೋವೈದ್ಯಕೀಯ ಮೌಲ್ಯಮಾಪನ ಮಾಡಿ ಆಕೆಯ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅರ್ಜಿಯನ್ನು ಅಂಗೀಕರಿಸಿದರು. ಪತಿಯ ಸಾವಿನ ಬಳಿಕ ಮಹಿಳೆ ತೀವ್ರ ಆಘಾತಕ್ಕೊಳಗಾಗಿದ್ದಾಳೆ ಎಂದು ಏಮ್ಸ್​ನ ವೈದ್ಯರು ವರದಿ ನೀಡಿದ್ದರು. ಯಾವುದೇ ಸಮಯದಲ್ಲಿ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುವ ಸ್ಥಿತಿ ಅರ್ಜಿದಾರರದ್ದಾಗಿದೆ. ಆಕೆ ತನಗೆ ತಾನೇ ಹಾನಿಮಾಡಿಕೊಳ್ಳುವ ಸಾಧ್ಯತೆಯೂ ಇರಲಿದೆ.

ದೆಹಲಿ ಮೂಲದ ಮಹಿಳೆಯ ಪತಿ ಇತ್ತೀಚೆಗೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಆಕೆ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದಳು. ವೈದ್ಯಕೀಯ ವರದಿಯೂ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತೋರಿಸಿದೆ. ಅರ್ಜಿದಾರರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಅರ್ಜಿದಾರರ ಸ್ಥಿತಿಯಿಂದ ಮಾನಸಿಕ ಸಮತೋಲನ ಕಳೆದುಕೊಳ್ಳುವ ಅಪಾಯವಿದೆ. ಈ ಪ್ರಕ್ರಿಯೆಯಲ್ಲಿ ಅವಳು ತನಗೆ ತಾನೇ ಹಾನಿ ಮಾಡಿಕೊಳ್ಳಬಹುದು. ಈ ಹಂತದಲ್ಲಿ ನಾವು ಅವಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿಸುತ್ತೇವೆ. ಆಕೆಯ ಗರ್ಭಾವಸ್ಥೆಯಲ್ಲಿ ಮುಂದುವರಿಯುವುದು ಅಪಾಯಕಾರಿ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಅರ್ಜಿದಾರರಿಗೆ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನೀಡಬೇಕು ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಏಕೆಂದರೆ ಅರ್ಜಿದಾರರಿಗೆ ಗರ್ಭಾವಸ್ಥೆಯಲ್ಲಿ ಮುಂದುವರಿಯಲು ಅವಕಾಶ ನೀಡುವುದರಿಂದ ಅರ್ಜಿದಾರರ ಮಾನಸಿಕ ಸ್ಥಿರತೆಯನ್ನು ಕುಗ್ಗಿಸಬಹುದು ಏಕೆಂದರೆ ಖಿನ್ನತೆಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ನ್ಯಾಯಮೂರ್ತಿ ಪ್ರಸಾದ್ ತಿಳಿಸಿದ್ದಾರೆ.

ಮತ್ತಷ್ಟು ಓದಿ:12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಕೇರಳ ಹೈಕೋರ್ಟ್: ವರದಿ

ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಒತ್ತಾಯಿಸುವುದು ಆಕೆಯ ಖಾಸಗಿತನದ ಮೇಲಿನ ದಾಳಿಯಾಗಿದೆ ಎಂದು ಆಕೆಯ ವಕೀಲರು ವಾದಿಸಿದ್ದರು. ಆಕೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯೂ ಇತ್ತು, ತೀವ್ರ ಖಿನ್ನತೆಗೆ ಒಳಗಾಗಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಳೆಯ ಪತಿ 2023ರ ಅಕ್ಟೋಬರ್ 9ರಂದು ನಿಧನರಾಗಿದ್ದಾರೆ, ಬಳಿಕ ಆಕೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಅರ್ಜಿದಾರರು ಗರ್ಭಪಾತದ ಪ್ರಕ್ರಿಯೆಗೆ ಒಳಗಾಗುವ ಸ್ಥಿತಿಯಲ್ಲಿದ್ದಾರೆಯೇ ಎಂಬ ವರದಿಯನ್ನು ನೀಡುವಂತೆ ಪೀಠಕ್ಕೆ ಸೂಚಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!