ಪತಿಯ ಸಾವಿನ ಬಳಿಕ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ಅಂತಾ ಸಮಯದಲ್ಲಿ ಆಕೆಯ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಧವೆಯೊಬ್ಬರು ತನ್ನ 27 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು, ಅಷ್ಟೇ ಅಲ್ಲದೆ ತನ್ನ ಮಾನಸಿಕ ಸ್ಥಿತಿ ಬಗ್ಗೆಯೂ ಮಾಹಿತಿ ನೀಡಿದ್ದರು. ಗಂಡನ ಸಾವಿನಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಕೋರ್ಟ್ಗೆ ಹೇಳಲಾಗಿತ್ತು.
ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಅವರು ಅರ್ಜಿದಾರರ ಮನೋವೈದ್ಯಕೀಯ ಮೌಲ್ಯಮಾಪನ ಮಾಡಿ ಆಕೆಯ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅರ್ಜಿಯನ್ನು ಅಂಗೀಕರಿಸಿದರು. ಪತಿಯ ಸಾವಿನ ಬಳಿಕ ಮಹಿಳೆ ತೀವ್ರ ಆಘಾತಕ್ಕೊಳಗಾಗಿದ್ದಾಳೆ ಎಂದು ಏಮ್ಸ್ನ ವೈದ್ಯರು ವರದಿ ನೀಡಿದ್ದರು. ಯಾವುದೇ ಸಮಯದಲ್ಲಿ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುವ ಸ್ಥಿತಿ ಅರ್ಜಿದಾರರದ್ದಾಗಿದೆ. ಆಕೆ ತನಗೆ ತಾನೇ ಹಾನಿಮಾಡಿಕೊಳ್ಳುವ ಸಾಧ್ಯತೆಯೂ ಇರಲಿದೆ.
ದೆಹಲಿ ಮೂಲದ ಮಹಿಳೆಯ ಪತಿ ಇತ್ತೀಚೆಗೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಆಕೆ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದಳು. ವೈದ್ಯಕೀಯ ವರದಿಯೂ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತೋರಿಸಿದೆ. ಅರ್ಜಿದಾರರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಅರ್ಜಿದಾರರ ಸ್ಥಿತಿಯಿಂದ ಮಾನಸಿಕ ಸಮತೋಲನ ಕಳೆದುಕೊಳ್ಳುವ ಅಪಾಯವಿದೆ. ಈ ಪ್ರಕ್ರಿಯೆಯಲ್ಲಿ ಅವಳು ತನಗೆ ತಾನೇ ಹಾನಿ ಮಾಡಿಕೊಳ್ಳಬಹುದು. ಈ ಹಂತದಲ್ಲಿ ನಾವು ಅವಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿಸುತ್ತೇವೆ. ಆಕೆಯ ಗರ್ಭಾವಸ್ಥೆಯಲ್ಲಿ ಮುಂದುವರಿಯುವುದು ಅಪಾಯಕಾರಿ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.
ಅರ್ಜಿದಾರರಿಗೆ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನೀಡಬೇಕು ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಏಕೆಂದರೆ ಅರ್ಜಿದಾರರಿಗೆ ಗರ್ಭಾವಸ್ಥೆಯಲ್ಲಿ ಮುಂದುವರಿಯಲು ಅವಕಾಶ ನೀಡುವುದರಿಂದ ಅರ್ಜಿದಾರರ ಮಾನಸಿಕ ಸ್ಥಿರತೆಯನ್ನು ಕುಗ್ಗಿಸಬಹುದು ಏಕೆಂದರೆ ಖಿನ್ನತೆಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ನ್ಯಾಯಮೂರ್ತಿ ಪ್ರಸಾದ್ ತಿಳಿಸಿದ್ದಾರೆ.
ಮತ್ತಷ್ಟು ಓದಿ:12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಕೇರಳ ಹೈಕೋರ್ಟ್: ವರದಿ
ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಒತ್ತಾಯಿಸುವುದು ಆಕೆಯ ಖಾಸಗಿತನದ ಮೇಲಿನ ದಾಳಿಯಾಗಿದೆ ಎಂದು ಆಕೆಯ ವಕೀಲರು ವಾದಿಸಿದ್ದರು. ಆಕೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯೂ ಇತ್ತು, ತೀವ್ರ ಖಿನ್ನತೆಗೆ ಒಳಗಾಗಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.
ಮಹಿಳೆಯ ಪತಿ 2023ರ ಅಕ್ಟೋಬರ್ 9ರಂದು ನಿಧನರಾಗಿದ್ದಾರೆ, ಬಳಿಕ ಆಕೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಅರ್ಜಿದಾರರು ಗರ್ಭಪಾತದ ಪ್ರಕ್ರಿಯೆಗೆ ಒಳಗಾಗುವ ಸ್ಥಿತಿಯಲ್ಲಿದ್ದಾರೆಯೇ ಎಂಬ ವರದಿಯನ್ನು ನೀಡುವಂತೆ ಪೀಠಕ್ಕೆ ಸೂಚಿಸಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ