Delhi Hit and Run: ಮರ್ಸಿಡೀಸ್ ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು, ಚಾಲಕ ಪರಾರಿ

ಕಾರೊಂದು ವೇಗವಾಗಿ ಬಂದು ಸೈಕಲ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿಟಿವಿ ಪರಿಶೀಲಿಸಿ ತನಿಖೆ ಆರಂಭಿಸಿದ್ದಾರೆ.

Delhi Hit and Run: ಮರ್ಸಿಡೀಸ್ ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು, ಚಾಲಕ ಪರಾರಿ
ಕಾರುImage Credit source: India TV
Follow us
ನಯನಾ ರಾಜೀವ್
|

Updated on: Aug 18, 2024 | 10:20 AM

ವೇಗವಾಗಿ ಬಂದ ಮರ್ಸಿಡೀಸ್ ಕಾರೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ದೆಹಲಿಯ ಆಶ್ರಮ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ರಾಜೇಶ್ ಎಂದು ಪೊಲೀಸರು ಗುರುತಿಸಿದ್ದು, ದೆಹಲಿಯ ಆಗ್ನೇಯ ಪ್ರದೇಶದಲ್ಲಿ ಸೈಕಲ್​ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದ ಬಂದ ವಾಹನವು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ದುರದೃಷ್ಟವಶಾತ್ ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಸಂಸದರ ಮಗಳ ಕಾರು ರಾಜ್ಯಸಭಾ ಸಂಸದರ ಮಗಳ ಕಾರು ಫುಟ್​ಪಾತ್​ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಹೆಸರು ಕೇಳಿಬರುತ್ತಿದೆ.

ಈ ಘಟನೆಯಲ್ಲಿ ಸೂರ್ಯ ಎನ್ನುವ 21ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಾಧುರಿಯನ್ನು ಚೆನ್ನೈನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ, ಆದರೆ ಶೀಘ್ರವೇ ಅವರಿಗೆ ಜಾಮೀನು ಸಿಕ್ಕಿದೆ.

ಈ ಹಿಂದೆ ಮೇ 19ರಂದು ಪುಣೆಯ ಕಲ್ಯಾಣಿನಗರದಲ್ಲಿ ಅಪ್ರಾಪ್ತ ಬಾಲಕ ವೇದಾಂತ್ ಅಗರ್ವಾಲ್ ಎಂಬಾತ ತನ್ನ ಪೋರ್ಷೆ ಕಾರನ್ನು ಬೈಕ್​ಗೆ ಡಿಕ್ಕಿ ಹೊಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದೀಗ ಆತನ ತಂದೆ, ತಾಯಿ ಹಾಗೂ ಅಜ್ಜನನ್ನು ವಿವಿಧ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.

ಮತ್ತಷ್ಟು ಓದಿ: 2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ

ಈ ಪ್ರಕರಣ ಏನು? ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಫುಟ್​ ಪಾತ್​ನಲ್ಲಿ ಮಲಗಿದ್ದ ವ್ಯಕ್ತಿಯನ್ನು ನುಜ್ಜುಗುಜ್ಜುಗೊಳಿಸಿತ್ತು. ಇದರಿಂದಾಗಿ ಆತ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಮಾಧುರಿ ತಕ್ಷಣವೇ ಸ್ಥಳದಿಂದ ಓಡಿಹೋಗಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ ಅವರ ಸ್ನೇಹಿತರೊಬ್ಬರು ಕಾರಿನಿಂದ ಇಳಿದು ಅಪಘಾತದ ನಂತರ ಜಮಾಯಿಸಿದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು