Delhi Hospital Fire: ದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಅಗ್ನಿ ಅವಘಡ, 6 ನವಜಾತ ಶಿಶುಗಳು ಸಾವು
ಕಳೆದ ಎರಡ್ಮೂರು ದಿನಗಳಿಂದ ಅಗ್ನಿ ಅವಘಡದ ಘಟನೆಗಳು ಹೆಚ್ಚಿವೆ. ಗುಜರಾತ್‌ನ ಗೇಮಿಂಗ್ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 30ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಆ ಸುದ್ದಿ ಮಾಸುವ ಮುನ್ನವೇ ದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ.
ದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡ(Fire Accident)ದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಗ್ನಿಶಾಮಕ ದಳದ ಪ್ರಕಾರ, ಈ ಭೀಕರ ಅಪಘಾತದಲ್ಲಿ 12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಒಬ್ಬರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ.
ಶನಿವಾರ (ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ಮಗು ಸೇರಿದಂತೆ ಇನ್ನೂ ಆರು ಶಿಶುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಈ ಬಗ್ಗೆ ತನಿಖೆ ನಡೆಸುತ್ತಿದೆ.
ಮತ್ತಷ್ಟು ಓದಿ: ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ; 24 ಮಂದಿ ಸಾವು
ದೆಹಲಿಯ ಶಾಹ್ದಾರಾ ಪ್ರದೇಶದ ಆಜಾದ್ ನಗರ ಪಶ್ಚಿಮದಲ್ಲಿರುವ ವಸತಿ ಕಟ್ಟಡದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಲವಾರು ಅಗ್ನಿಶಾಮಕ ದಳದ ವಾಹನಗಳನ್ನು ಇಲ್ಲಿಗೆ ಕಳುಹಿಸಲಾಯಿತು ಮತ್ತು 13 ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು.
ಶನಿವಾರ ಮತ್ತು ಭಾನುವಾರ ಮಧ್ಯರಾತ್ರಿ 2.35 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 5 ಅಗ್ನಿಶಾಮಕ ದಳಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ