Delhi Tragedy: ದೆಹಲಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ, 20 ಮಂದಿ ಸಾವು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಜನ

ದೆಹಲಿಯ ಮಾಳವೀಯ ನಗರದ ಮಿಕಾಸಾ ಇನ್ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೆಳಗ್ಗೆ 8:50ಕ್ಕೆ ನೆಲಮಾಳಿಗೆಯಿಂದ ಪ್ರಾರಂಭವಾದ ಬೆಂಕಿ ತ್ವರಿತವಾಗಿ ಹರಡಿದ್ದು, ಅನೇಕರು ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ. ಹಲವರು ವೈದ್ಯಕೀಯ ಚಿಕಿತ್ಸೆಗಾಗಿ ಬಂದ ವಿದೇಶಿಗರಾಗಿದ್ದರು.

Delhi Tragedy: ದೆಹಲಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ, 20 ಮಂದಿ ಸಾವು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಜನ
ಹೋಟೆಲ್
Image Credit source: NDTV

Updated on: Jun 03, 2026 | 12:48 PM

ನವದೆಹಲಿ, ಜೂನ್ 03: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಮಿಕಾಸಾ ಇನ್’ ಹೋಟೆಲ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ(Fire Tragedy) ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ್ದಾರೆ. ಬೆಳಗ್ಗೆ 8.50 ರ ಸುಮಾರಿಗೆ ಹೋಟೆಲ್‌ನ ನೆಲಮಾಳಿಗೆಯಿಂದ ಬೆಂಕಿ ಕಾಣಿಸಿಕೊಂಡ ತಕ್ಷಣ, ದೆಹಲಿ ಅಗ್ನಿಶಾಮಕ ಸೇವೆಗಳು (DFS) ತಕ್ಷಣವೇ ಕಾರ್ಯಪ್ರವೃತ್ತವಾಗಿವೆ. ಅಪಾಯದ ಕರೆ ಬಂದ ಕೆಲವೇ ನಿಮಿಷಗಳಲ್ಲಿ ಎರಡು ವಾಟರ್ ಎಂಜಿನ್‌ಗಳು, ಎರಡು ಬೌಸರ್‌ಗಳು ಮತ್ತು ಒಂದು ತ್ವರಿತ ಪ್ರತಿಕ್ರಿಯೆ ವಾಹನ (QRV) ಸೇರಿದಂತೆ ಆಧುನಿಕ ರಕ್ಷಣಾ ಘಟಕಗಳು ಸ್ಥಳಕ್ಕೆ ಧಾವಿಸಿದವು. ಕಿರಿದಾದ ಗಲ್ಲಿಗಳ ನಡುವೆಯೂ ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಐದು ಅಂತಸ್ತಿನ ಈ ಹೋಟೆಲ್‌ನಲ್ಲಿ ಸುಮಾರು 25 ಕೊಠಡಿಗಳಿದ್ದು, ಅವಘಡದ ಸಮಯದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಇದ್ದರು ಎಂದು ಅಂದಾಜಿಸಲಾಗಿದೆ. ಇವರಲ್ಲಿ ಹೆಚ್ಚಿನವರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು. ಬೆಂಕಿ ಹರಡುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಹೋಟೆಲ್ ಸಿಬ್ಬಂದಿ ಅಗ್ನಿಶಾಮಕ ದಳದೊಂದಿಗೆ ಕೈಜೋಡಿಸಿ, ಸಿಲುಕಿಕೊಂಡಿದ್ದ ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಹರಸಾಹಸ ಪಟ್ಟರು. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ರೆಸ್ಟೋರೆಂಟ್ ಸಿಬ್ಬಂದಿಯ ಜಾಣ್ಮೆ
ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಅಡುಗೆಯವರಾಗಿ ಕೆಲಸ ಮಾಡುವ ಕೇಸರ್ ಸಿಂಗ್ ಅವರು ಬೆಳಗ್ಗೆ ವಿದ್ಯುತ್ ಸ್ಟೌವ್ ಆನ್ ಮಾಡಲು ಹೋದಾಗ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಅವರು ಗಾಬರಿಯಾಗದೆ ತಕ್ಷಣವೇ ತಮ್ಮ ಸಹಾಯಕರು ಹಾಗೂ ಹೋಟೆಲ್‌ನ ಇತರೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಎಲ್ಲರೂ ಬೇಗನೆ ಹೊರಹೋಗಲು ದಾರಿ ಮಾಡಿಕೊಟ್ಟರು.

ಮತ್ತಷ್ಟು ಓದಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ದುರ್ಮರಣ

ಅನಿರೀಕ್ಷಿತವಾಗಿ ಸಂಭವಿಸಿದ ಈ ಅವಘಡದಲ್ಲಿ ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರದ ಸಂಗತಿಯಾದರೂ, ದೆಹಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಹೌಜ್ ರಾಣಿಯ ಯುವಕರ ಸಕಾಲಿಕ ಸಾಹಸದಿಂದಾಗಿ ಉಳಿದ ಜನರುಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವು ನೀಡುವುದಾಗಿ ಪಿಎಂಒ ಘೋಷಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:45 pm, Wed, 3 June 26

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us